ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ನಾಳೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಹೊಸ ಸರ್ಕಾರದ ಸಚಿವ ಸಂಪುಟ ರಚನೆ, ಡಿಸಿಎಂ ಹುದ್ದೆಗಳ ಹಂಚಿಕೆ ಹಾಗೂ KPCC ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗಂಭೀರ ಚರ್ಚೆ ನಡೆಸುತ್ತಿದೆ.
ಈ ನಡುವೆಯೇ ದೆಹಲಿಯಲ್ಲಿರುವ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆದಿದೆ. ಈ ಸಭೆಯಲ್ಲಿ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಿರ್ಗಮಿತ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಖರ್ಗೆ ಭಾಗವಹಿಸಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ.
ಮೂಲಗಳ ಪ್ರಕಾರ, ಹೊಸ ಸಚಿವ ಸಂಪುಟದಲ್ಲಿ ಪ್ರಾದೇಶಿಕ ಹಾಗೂ ಜಾತಿ ಸಮೀಕರಣಕ್ಕೆ ಆದ್ಯತೆ ನೀಡುವ ಬಗ್ಗೆ ಚರ್ಚೆ ನಡೆದಿದ್ದು, ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಕುರಿತೂ ಮಾತುಕತೆ ನಡೆದಿದೆ ಎನ್ನಲಾಗಿದೆ. ಜೊತೆಗೆ KPCC ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬುದರ ಬಗ್ಗೆಯೂ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಮುಂದುವರಿದಿದೆ.
ಇಂದಿನ ಪ್ರಮಾಣ ವಚನ ಸಮಾರಂಭದ ಬಳಿಕ ಸಚಿವ ಸಂಪುಟದ ಮೊದಲ ಪಟ್ಟಿಯೂ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ನಿರ್ಮಾಣವಾಗಿದೆ.








