ಮಾಜಿ ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ ವಿಶ್ರಾಂತಿ ಸೂಚಿಸಿದ ವೈದ್ಯರು…
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೈಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಆಸ್ಪತ್ರಗೆ ದಾಖಲಾಗಿದ್ದು, ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನಲಾಗುತಿತ್ತು. ಆದರೆ ಅವರ ಆರೋಗ್ಯ ಪರೀಕ್ಷಿಸಿದ ವೈದ್ಯರು ಶಸ್ತ್ರ ಚಿಕಿತ್ಸೆಯ ಅಗತ್ಯವಿಲ್ಲ ಎಂದಿದ್ದಾರೆ.
ಭೇದಿಯಿಂದಾಗಿ ಸಿದ್ದರಾಮಯ್ಯ ನಗರದ ಹೆಚ್‌ಎಎಲ್ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಪೈಲ್ಸ್ ಇರುವ ಹಿನ್ನಲೆಯಲ್ಲಿ ವೈದ್ಯರು ಈ ಹಿಂದೆ ಮೈನರ್ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಸಲಹೆ ನೀಡಿದ್ದರು.
ಇದೀಗ ವೈದ್ಯರು ಶಸ್ತ್ರ ಚಿಕಿತ್ಸೆಯ ಅಗತ್ಯವಿಲ್ಲ ಎಂದು ಹೇಳಿ ಮನೆಯಲ್ಲೇ ನಾಲ್ಕು ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.
Siddaramaiah: Doctors advised former CM Siddaramaiah to rest.