ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರುತ್ತಾರೆ ಎಂದು ಮೈಸೂರಿನಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಡಾ ಹಗರಣ ಸಣ್ಣ ವಿಚಾರ. ಈ ಮುಡಾದಲ್ಲಿ ಮೂರು ಪಕ್ಷಗಳು ಆಡಳಿತ ನಡೆಸಿವೆ. ಬಿಜೆಪಿ ಹಾಗೂ ಜೆಡಿಎಸ್ ಸಿಎಂ ವಿರುದ್ಧ ಕುತಂತ್ರ ಮಾಡುತ್ತಿವೆ. ನಾವು ಕೂಡ ಹೋರಾಟ ಮಾಡುತ್ತೇವೆ ಎಂದಿದ್ದಾರೆ.
ಸಿಎಂ ಅಧಿಕಾರ ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು, ಯಾವುದೇ ಶೇರಿಂಗ್ ಇಲ್ಲಾ, ಏನಿಲ್ಲ. ಇಂತಹ ವಿಚಾರಗಳು ಚರ್ಚೆಯೆ ಆಗಿಲ್ಲ. ಸಿದ್ದರಾಮಯ್ಯ ಪೂರ್ಣವಾಧಿ ಸಿಎಂ ಆಗಿ ಮುಂದುವರೆಯುತ್ತಾರೆ. ಜಿ.ಟಿ. ದೇವೇಗೌಡರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದಿದ್ದಾರೆ.