ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಮದ್ಯ ಪ್ರಿಯರಿಗೆ ಮತ್ತೊಮ್ಮೆ ಶಾಕ್ ನೀಡಿದ್ದಾರೆ.
ಮತ್ತೊಮ್ಮೆ ಮದ್ಯದ ದರ ಏರಿಕೆ ಮಾಡಿದ್ದಾರೆ. ಮದ್ಯದ ಘೋಷಿತ ಸ್ಲಾಬ್ ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಐಎಂಎಲ್, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ. ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಗೆ ಮಾಡಿದೆ. 650 ಮಿಲಿ ಬಿಯರ್ ಬಾಟಲಿಗೆ 8-10 ರೂ. ವರೆಗೆ ದರ ಹೆಚ್ಚಾಗಲಿದೆ ಎನ್ನಲಾಗುತ್ತಿದೆ.