ನಾನು ಅಪ್ಪಟ ಕಾಂಗ್ರೆಸ್ಸಿಗ, ಪಕ್ಷ ಕಟ್ಟುವ ಅವಶ್ಯಕತೆ ಇಲ್ಲ : ಸಿದ್ದರಾಮಯ್ಯ
ಮಂಡ್ಯ : ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿಲಿ ಎಂಬ ಹೆಚ್ ಡಿ ಕುಮಾರಸ್ವಾಮಿ ಸವಾಲಿಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,ನಾನು ಈಗಾಗಲೇ ಪಕ್ಷ ಕಟ್ಟಿದ್ದೇನೆ, ಈಗ ಪಕ್ಷ ಕಟ್ಟುವ ಅವಶ್ಯಕತೆ ನನಗಿಲ್ಲ ಎಂದು ಟಾಂಗ್ ನೀಡಿದ್ದಾರೆ.
ನಿನ್ನೆ ಟ್ವಿಟ್ಟರ್ ನಲ್ಲಿ “ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ.
ಸವಾಲು ಸ್ವೀಕರಿಸಲಾಗದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ” ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದರು.

ಇದಕ್ಕೆ ಇಂದು ಉತ್ತರ ನೀಡಿದ ಸಿದ್ದರಾಮಯ್ಯ, ನಾನು ಈಗಾಗಲೇ ಪಕ್ಷ ಕಟ್ಟಿದ್ದೇನೆ, ಈಗ ಪಕ್ಷ ಕಟ್ಟುವ ಅವಶ್ಯಕತೆ ನನಗಿಲ್ಲ. ನಾನೀಗ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ, ನಾನು ಅಪ್ಪಟ ಕಾಂಗ್ರೆಸ್ಸಿಗನಾಗಿದ್ದೇನೆ.
ಆ ಪಕ್ಷದಲ್ಲಿರುವ ಕಾರಣ ಬೇರೆ ಪಕ್ಷ ಕಟ್ಟೋ ಅವಶ್ಯಕತೆ ಇಲ್ಲ, ಮಾಜಿ ಸಿಎಂ ಕುಮಾರಸ್ವಾಮಿ ಪಕ್ಷ ಕಟ್ಟಿ ತೋರಿಸಲಿ ಎಂದು ಹೇಳಿದರು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಸಿದ್ದರಾಮಯ್ಯ ಮಂಡ್ಯಕ್ಕೆ ಆಗಮಿಸುವ ವೇಳೆ ಮದ್ದೂರಿನ ಶಿವಪುರದ ಮದ್ದೂರು ಟಿಫಾನೀಸ್ ಸೆಂಟರ್ ಬಳಿ ಕಾರಿನಲ್ಲೆ ಕುಳಿತು ಮದ್ದೂರು ವಡೆ ಸೇವಿಸಿ ಟೀ ಕುಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಈ ಮೇಲಿನಂತೆ ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








