ಮೈತ್ರಿ ಪತನಕ್ಕೆ ಸಿದ್ದರಾಮಯ್ಯ, ಹೆಚ್ ಡಿಕೆ ಕಾರಣ : ಜಿ.ಟಿ.ದೇವೇಗೌಡ
ಮೈಸೂರು : ಮೈತ್ರಿ ಸರ್ಕಾರ ಪತನವಾಗಿ ಒಂದು ವರ್ಷ ಕಳೆದರೂ ಕಾಂಗ್ರೆಸ್ ಜೆಡಿಎಸ್ ನಾಯಕರು ಅದರ ಬಗ್ಗೆಯೇ ಪದೇ ಪದೇ ಹೇಳಿಕೆಗಳನ್ನು ಕೊಡುತ್ತಾ ಸಾಗುತ್ತಿದ್ದಾರೆ.
ಸದ್ಯ ರಾಜ್ಯದಲ್ಲಿ ಮೈತ್ರಿ ಸರ್ಕಾರದ ಪತನದ ಬಗ್ಗೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವೆ ವಾಗ್ಸಮರ ನಡೆಯುತ್ತಿದೆ.
ಈ ಬಗ್ಗೆ ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಇಬ್ಬರೂ ಕಾರಣ ಎಂದು ಹೇಳಿದ್ದಾರೆ.
ಸಿದ್ದಲಿಂಗಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ಮೈತ್ರಿ ಸರ್ಕಾರ ಬೀಳುತ್ತೆ ಅಂತ ಗೊತ್ತಿದ್ದರೂ ಕುಮಾರಸ್ವಾಮಿ ಅಮೆರಿಕಕ್ಕೆ ಹೋಗಿ ಕುಳಿತುಕೊಂಡರು.
ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರ : ಸರ್ಕಾರ ಮಧ್ಯಪ್ರವೇಶಕ್ಕೆ ಹೆಚ್ ಡಿಕೆ ಒತ್ತಾಯ
ಶಾಸಕರು ಬಿಟ್ಟು ಹೋಗ್ತಾರೆ ಅಂತ ಗೊತ್ತಿದ್ದರೂ ಸಿದ್ದರಾಮಯ್ಯ ಅವರನ್ನು ತಡೆಯಲು ಮುಂದಾಗಲಿಲ್ಲ. ಆದ್ದರಿಂದ ಮೈತ್ರಿ ಸರ್ಕಾರ ಬೀಳುವುದಕ್ಕೆ ಇಬ್ಬರೂ ಕಾರಣೀಕರ್ತರು ಎಂದರು.
ಇದೇ ವೇಳೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ಸೋಲಿನ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಜಿ.ಟಿ. ದೇವೇಗೌಡ, ಸಿದ್ದರಾಮಯ್ಯ ಅವರ ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ.
ಮೊದಲು ವರುಣ, ಚಾಮುಂಡೇಶ್ವರಿ ಒಂದೇ ಕ್ಷೇತ್ರವಾಗಿತ್ತು. ತಾಲೂಕು ಬೋರ್ಡ್ ಮೆಂಬರ್‍ಯಿಂದ ಹಿಡಿದು ಉಪ ಮುಖ್ಯಮಂತ್ರಿ ಆಗುವವರೆಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಇದ್ದರು.
ವರುಣ ಕ್ಷೇತ್ರವಾದ ನಂತರ ಅಲ್ಲಿಗೆ ಹೋಗಿ ಗೆದ್ದು ಮುಖ್ಯಮಂತ್ರಿಯಾದರು. ಆದರೂ ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದು ಬಯಸಿದ್ದರು.
ಆದರೆ ಜನ ಅವರನ್ನು ಕೈ ಹಿಡಿಯಲಿಲ್ಲ. ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









