ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು : ಮಣಿಪಾಲ್ ಆಸ್ಪತ್ರೆಗೆ ದಾಖಲು Siddaramaiah
ಬೆಂಗಳೂರು : ತೀವ್ರ ಜ್ವರದಿಂದ ಬಳಲುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿನ್ನೆ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಕೊರೋನಾ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ನೆಗೆಟಿವ್ ಬಂದಿತ್ತು.
ಬಳಿಕ ಅವರು ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದ್ರೆ ಈಗ ಜ್ವರ ಕಡಿಮೆ ಆಗದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಇಂದು ನಿಗದಿಯಾಗಿದ್ದಂತ ಎಲ್ಲಾ ಕಾರ್ಯಕ್ರಮಗಳನ್ನು ವೈದ್ಯರ ಸೂಚನೆಯ ಮೇರೆಗೆ ರದ್ದು ಪಡಿಸಲಾಗಿದೆ.
ಈ ಮೊದಲು ಸಿದ್ದರಾಮಯ್ಯ ಕೊರೊನಾ ಸೋಂಕಿಗೆ ಸಿಲುಕಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಇಬ್ಬರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಬಳಿಕ ಯಡಿಯೂರಪ್ಪ ಎರಡನೆ ಬಾರಿಗೆ ಸೋಂಕಿಗೆ ಸಿಲುಕಿದ್ದರು.