ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

Shwetha by Shwetha
March 4, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ. ವಿರೋಧ ಪಕ್ಷಗಳ ನಾಯಕರಿಗೆ ತಿರುಗೇಟು ನೀಡುವ ಭರದಲ್ಲಿ ಸಿಎಂ ಆಡಿರುವ ಮಾತುಗಳು ಅಧಿಕಾರ ಹಸ್ತಾಂತರದ ಮುನ್ಸೂಚನೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ನಾಯಕತ್ವ ಬದಲಾವಣೆ ಪಕ್ಕಾನಾ

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಒಂದೆಡೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ನನ್ನ ತಂದೆಯೇ ಐದು ವರ್ಷ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದರೆ, ಇತ್ತ ಸ್ವತಃ ಸಿದ್ದರಾಮಯ್ಯ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯೇ ಇರುತ್ತಾರೆ ಹಾಗೂ ಈ ಅವಧಿಯನ್ನು ಕಾಂಗ್ರೆಸ್ ಪಕ್ಷವೇ ಪೂರ್ಣಗೊಳಿಸಲಿದೆ ಎಂದು ಸಿಎಂ ಹೇಳಿದ್ದಾರೆ. ಇಲ್ಲಿ ಗಮನಿಸಬೇಕಾದ ಸೂಕ್ಷ್ಮ ವಿಚಾರವೇನೆಂದರೆ, ಸಿದ್ದರಾಮಯ್ಯ ಅವರು ಎಲ್ಲಿಯೂ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಎಂದು ಉಲ್ಲೇಖಿಸಿಲ್ಲ. ಇದು ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಡುವ ಮನಸ್ಸು ಮಾಡಿರುವ ಲಕ್ಷಣವೇ ಎಂಬ ಗುಸುಗುಸು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

ಹಾಲು ಜೇನಿನಂತಹ ಸಂಬಂಧಕ್ಕೆ ಹುಳಿ ಹಿಂಡಬೇಡಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಆರ್.ಅಶೋಕ್ ಮತ್ತು ಎಚ್.ಡಿ.ಕುಮಾರಸ್ವಾಮಿ ಮಾಡಿದ್ದ ಆರೋಪಕ್ಕೆ ಸಿಎಂ ಖಡಕ್ ಆಗಿ ಉತ್ತರಿಸಿದ್ದಾರೆ. ವಿರೋಧ ಪಕ್ಷದ ನಾಯಕರು ನಿರುದ್ಯೋಗಿಗಳಾಗಿದ್ದು, ನನ್ನ ಮತ್ತು ಡಿಕೆಶಿ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಯತ್ನಿಸುತ್ತಿದ್ದಾರೆ. ನಮ್ಮದು ಹಾಲು-ಜೇನಿನಂತಹ ಸಂಬಂಧ. ನಿಮ್ಮ ಪ್ರಯತ್ನದಿಂದ ನಿಮ್ಮೊಳಗಿನ ಅಸೂಯೆ ಹೊರಬರುತ್ತದೆಯೇ ಹೊರತು ನಮ್ಮ ಸಂಬಂಧ ಕೆಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಹೈಕಮಾಂಡ್ ಮಾತೇ ಅಂತಿಮ

ತಾವು ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಹೈಕಮಾಂಡ್ ಆದೇಶಕ್ಕೆ ತಲೆಬಾಗುವವರು ಎಂಬುದನ್ನು ಸಿಎಂ ಪುನರುಚ್ಚರಿಸಿದ್ದಾರೆ. ನಮ್ಮ ಶಾಸಕರು ಯಾರೂ ನನ್ನ ಅಥವಾ ಡಿಕೆಶಿ ಬೆಂಬಲಿಗರಲ್ಲ, ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸುಳ್ಳು ಸುದ್ದಿ ಹಬ್ಬಿಸಿ ಡಿಕೆಶಿಯನ್ನು ಒಲಿಸಿಕೊಳ್ಳುವ ಹಗಲುಗನಸು ಕಾಣುತ್ತಿದ್ದಾರೆ. ಎಷ್ಟೇ ಕಷ್ಟ ಬಂದರೂ ಡಿಕೆ ಶಿವಕುಮಾರ್ ಪಕ್ಷಕ್ಕೆ ನಿಷ್ಠರಾಗಿ ಉಳಿದವರು ಎಂದು ಸಿಎಂ ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.

ಗೂಢಚರ್ಯೆ ಸಂಸ್ಕೃತಿ ನಿಮ್ಮದು

ಫೋನ್ ಟ್ಯಾಪಿಂಗ್ ವಿಚಾರವಾಗಿ ತಿರುಗೇಟು ನೀಡಿರುವ ಸಿಎಂ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆದಿಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಮಾಡಲಾಗಿತ್ತು ಎಂದು ಸ್ವತಃ ಬಿವೈ ವಿಜಯೇಂದ್ರ ಆರೋಪಿಸಿದ್ದನ್ನು ನೆನಪಿಸಿದ್ದಾರೆ. ಬಿಜೆಪಿಯ ಆಪರೇಷನ್ ಕಮಲ, ರೆಸಾರ್ಟ್ ರಾಜಕಾರಣ ಮತ್ತು ಜೆಡಿಎಸ್ ನ ದ್ವೇಷ ರಾಜಕಾರಣದಿಂದಲೇ ರಾಜ್ಯ ಹಿಂದೆ ಅಸ್ಥಿರತೆ ಕಂಡಿತ್ತು. ಆದರೆ ಈಗ ಜನಾದೇಶ ನಮ್ಮ ಪರವಾಗಿದೆ. ವಿಪಕ್ಷಗಳ ಕುತಂತ್ರ, ಕುಚೇಷ್ಟೆಗಳ ನಡುವೆಯೂ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿರುತ್ತದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ವಿಪಕ್ಷಗಳ ಆರೋಪಕ್ಕೆ ಉತ್ತರಿಸಲು ಹೋದ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯೇ ಇರುತ್ತಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕುರ್ಚಿ ಬದಲಾವಣೆಯ ಸುಳಿವು ನೀಡಿದರಾ ಎಂಬುದು ಸದ್ಯದ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

by Shwetha
March 4, 2026
0

ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವುದನ್ನು ಅಮೆರಿಕದ ಅಧ್ಯಕ್ಷ ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ. ನಮ್ಮ ರಾಯಭಾರ ಕಚೇರಿಯ ಮೇಲಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram