Siddaramaiah | ಮೊಟ್ಟೆ ಎಸೆದವ ಕಾಂಗ್ರೆಸ್ ನವರಾಗಿದ್ದರೆ ಮೊದಲು ಜೈಲಿಗೆ ಕಳಿಸಿ
ಬೆಂಗಳೂರು : ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿರುವ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತ ಎಂದು ಬಿಜೆಪಿ ನಾಯಕರು ಹೇಳಿದ್ದರು.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು?
ಕಾಂಗ್ರೆಸ್ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?
ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ ಬಿಜೆಪಿ ನಡೆಸುತ್ತದೆ ಎಂದು ಮಡಿಕೇರಿಯಲ್ಲಿ ಸಾಬೀತಾಗಿದೆ.
ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಬಿಜೆಪಿ ಎಂದು ಪ್ರಶ್ನಿಸಿದೆ.