ಬೆಂಗಳೂರು : ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆ ಕುರಿತು ಟ್ವೀಟ್ ಮಾಡಿ ಕಾಂಗ್ರೆಸ್ ನಾಯಕರನ್ನು ಕುಟುಕಿದ್ದ ಬಿಜೆಪಿ ನಾಯಕ ಬಿ.ಎಲ್ ಸಂತೋಷ್ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತರಾಟೆಗೆ ತೆಗೆದುಕೊಂಡು ಸರಣಿ ಪ್ರಶ್ನೆಗಳನ್ನು ಕೇಳಿದ್ದರು. ಇದೀಗ ಸಿದ್ದರಾಮಯ್ಯ ಅವರ ಟ್ವೀಟ್ ಗಳ ಬಗ್ಗೆ ಮಾತನಾಡಿರುವ ಬಿ.ಎಲ್ ಸಂತೋಷ್, ತಮ್ಮದೇ ಪಕ್ಷದ ಶಾಸಕರ ಮನೆ ಮೇಲೆ ದಾಳಿ ನಡೆದರೂ ಖಂಡಿಸದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷಕ್ಕೆ ಅಸಂಬದ್ಧ ಪ್ರಶ್ನೆಗಳನ್ನು ಕೇಳುತ್ತಿದ್ದಾರೆಂದು ಹೇಳಿದ್ದಾರೆ.
ಬಿ.ಎಲ್ ಸಂತೋಷ್ ಟ್ವೀಟ್ ನಲ್ಲಿ, ಕರ್ನಾಟಕ ಮಾಜಿ ಮುಖ್ಯಮಂತ್ರಿಗಳು ನನಗೆ 13 ಟ್ವೀಟ್ ಮಾಡಿದ್ದಾರೆ. ತಮ್ಮ ಪಕ್ಷದ ದಲಿತ ಶಾಸಕರೊಬ್ಬರ ಮೇಲೆ ದಾಳಿ ನಡೆದಿದ್ದರೂ ಒಂದೂ ಟ್ವೀಟ್ ಮಾಡಿ ಖಂಡನೆ ವ್ಯಕ್ತಪಡಿಸಿಲ್ಲ. ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿಲ್ಲ. ಆದರೆ, ಬಿಜೆಪಿ ಪಕ್ಷಕ್ಕೆ ಅಸಂಬದ್ಧ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಮತ ಕಳೆದುಕೊಳ್ಳುವ ಭೀತಿಯಿಂದ ಸಮಾಧಾನಕರ ನೀತಿ ಅನುಸರಿಸುತ್ತಿದ್ದಾರೆ. ದಲಿತರ ವಿರುದ್ಧ ಕಾಂಗ್ರೆಸ್ ಎಂದು ಬರೆದುಕೊಂಡಿದ್ದಾರೆ.