Congressಗೆ ಸಿದ್ದರಾಮಯ್ಯ ಅನಿವಾರ್ಯ | ಬಿಜೆಪಿ ಟ್ವಿಟ್ಟರ್ ನಲ್ಲಿ ವ್ಯಂಗ್ಯ
ಬೆಂಗಳೂರು : ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇರಲ್ಲ ಎಂದು ಮಾಜಿ ಶಾಸಕ ರಾಜಣ್ಣ ಅವರ ಹೇಳಿಕೆಯನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ವ್ಯಂಗ್ಯವಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಒಂದು ಕಡೆ ಕೆಪಿಸಿಸಿ ಅಧ್ಯಕ್ಷರು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎಂದು ಹೇಳುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರ ಮೂಲಕ ʼಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆʼ ಎಂದು ಹೇಳಿಸುತ್ತಿದ್ದಾರೆ. #ಬುರುಡೆರಾಮಯ್ಯ ಅವರೇ, ಜಾಣ ಮೌನದ ಮೂಲಕ ಡಿಕೆಶಿವಕುಮಾರ್ ಅವರಿಗೆ ಟಕ್ಕರ್ ನೀಡುತ್ತಿದ್ದೀರಾ ಎಂದು ಪ್ರಶ್ನಿಸಿದೆ.
ಕಾಂಗ್ರೆಸ್ ನಾಯಕ ರಾಜಣ್ಣ ಅವರು, ಸಿದ್ದರಾಮಯ್ಯ ಪಕ್ಷಕ್ಕೆ ಅನಿವಾರ್ಯ ಎಂದಿದ್ದಾರೆ.
ಮೇ ತಿಂಗಳಲ್ಲಿ ರಾಜಸ್ಥಾನದಲ್ಲಿ ನಡೆಯುವ ಚಿಂತನ ಶಿಬಿರದಲ್ಲೂ ಸಿದ್ದರಾಮಯ್ಯ ಅವರ ಹೆಸರೇ ಇದೆ, ಅಲ್ಲದೆ ಕೆಲ ಶಾಸಕರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಹಾಗಾದರೆ @DKShivakumar
ಆಟಕ್ಕುಂಟು ಲೆಕ್ಕಕ್ಕಿಲ್ಲವೇ?#DKSvsSiddu— BJP Karnataka (@BJP4Karnataka) April 28, 2022
ಕಾಂಗ್ರೆಸ್ ನಾಯಕ ರಾಜಣ್ಣ ಅವರು, ಸಿದ್ದರಾಮಯ್ಯ ಪಕ್ಷಕ್ಕೆ ಅನಿವಾರ್ಯ ಎಂದಿದ್ದಾರೆ. ಮೇ ತಿಂಗಳಲ್ಲಿ ರಾಜಸ್ಥಾನದಲ್ಲಿ ನಡೆಯುವ ಚಿಂತನ ಶಿಬಿರದಲ್ಲೂ ಸಿದ್ದರಾಮಯ್ಯ ಅವರ ಹೆಸರೇ ಇದೆ, ಅಲ್ಲದೆ ಕೆಲ ಶಾಸಕರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹಾಗಾದರೆ ಡಿ.ಕೆ.ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ?
ವಿಪಕ್ಷ ನಾಯಕ @siddaramaiah ಅವರು ಚುನಾವಣೆಗೆ ಆರು ತಿಂಗಳ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎನ್ನುತ್ತಿದ್ದಾರೆ.
ಆದರೆ ಕೆಪಿಸಿಸಿ ಅಧ್ಯಕ್ಷ @DKShivakumar ಅವರು ಎಲ್ಲಿಯೂ ಈ ಬಗ್ಗೆ ಉಲ್ಲೇಖಿಸಿಲ್ಲ.
ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸಿದ್ದರಾಮಯ್ಯ ನಿಯಂತ್ರಣದಲ್ಲಿದೆಯೇ ಅಥವಾ ಡಿಕೆಶಿ ಬೆದರಿದ್ದಾರೆಯೇ?#DKSvsSiddu
— BJP Karnataka (@BJP4Karnataka) April 28, 2022
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಚುನಾವಣೆಗೆ ಆರು ತಿಂಗಳ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎಲ್ಲಿಯೂ ಈ ಬಗ್ಗೆ ಉಲ್ಲೇಖಿಸಿಲ್ಲ. ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸಿದ್ದರಾಮಯ್ಯ ನಿಯಂತ್ರಣದಲ್ಲಿದೆಯೇ ಅಥವಾ ಡಿಕೆಶಿ ಬೆದರಿದ್ದಾರೆಯೇ ಎಂದು ಬಿಜೆಪಿ ವ್ಯಂಗ್ಯವಾಡಿದೆ.
Siddaramaiah is indispensable to Congress BJP irony









