ಸಿದ್ದರಾಮಯ್ಯ ವೇಸ್ಟ್ ಬಾಡಿ.. ಅವನದ್ದು ಮುಗಿದ ಕಥೆ : ರಮೇಶ್ ಜಾರಕಿಹೊಳಿ Siddaramaiah saaksha tv
ಬೆಳಗಾವಿ : ಸಿದ್ದರಾಮಯ್ಯ ವೇಸ್ಟ್ ಬಾಡಿ. ಅವನದ್ದು ಮುಗಿದ ಕಥೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಇಂದು ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸಿದ್ದರಾಮಯ್ಯರ ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂಬ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದರು.
ಸಿದ್ದರಾಮಯ್ಯಗೆ ಭಯ ಹುಟ್ಟಿದೆ. ಕುರುಬರೆಲ್ಲರೂ ಸಿದ್ದರಾಮಯ್ಯರನ್ನು ರಿಜೆಕ್ಟ್ ಮಾಡಿದ್ದಾರೆ.ಹೀಗಾಗಿ, ತನಗೆ ಚ್ಯುತಿ ಬರುತ್ತೆ ಎಂದು ಅವರು ಹೆದರಿದ್ದಾರೆ. ಸಿದ್ದರಾಮಯ್ಯ ವೇಸ್ಟ್ ಬಾಡಿ. ಅವನದ್ದು ಮುಗಿದ ಕಥೆ, ಮುಂದಿನ ಬಾರಿ ಸೋಲ್ತಾನೆ ಎಂದು ಎಂದು ಏಕವಚನದಲ್ಲಿ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು.
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಸೋತ ಬಗ್ಗೆ ಪ್ರತಿಕ್ರಿಯೆ ನೀಡಿದ ರಮೇಶ್ ಜಾರಕಿಹೊಳಿ, ನಮ್ಮ ಪಕ್ಷದಲ್ಲಿ ಏನಾಗಿದೆ ಏನಿಲ್ಲ ಎಂಬುದು ನಮ್ಮ ವರಿಷ್ಠರ ಜತೆಗೆ ಮಾತನಾಡಿದ್ದೇನೆ. ಯಾಕೆ ಸೋತಿದೆ ಎಂಬುದು ಚರ್ಚೆ ಮಾಡಿ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದರು.