Siddaramaiah | ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಒಬ್ಬನೇ ಒಬ್ಬ RSS ವ್ಯಕ್ತಿ ಇದ್ದಾರ?
ಬೆಂಗಳೂರು : 1925ರಲ್ಲಿ ಆರಂಭವಾದ ಆರ್,ಎಸ್,ಎಸ್ ನವರಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಒಬ್ಬನೇ ಒಬ್ಬ ವ್ಯಕ್ತಿ ಇದ್ದಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ದೇಶದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ಪಾದಯಾತ್ರೆ. ರಾಜಕೀಯ ಅಧಿಕಾರ ಗಳಿಸುವ ಉದ್ದೇಶದಿಂದ ಕೈಗೊಂಡ ಪಾದಯಾತ್ರೆ ಇದಲ್ಲ. ಜಾತಿ, ಧರ್ಮ, ವರ್ಗಗಳ ಆಧಾರದಲ್ಲಿ ಒಡೆದಿರುವ ಭಾರತವನ್ನು ಒಂದುಗೂಡಿಸುವ ರಾಹುಲ್ ಗಾಂಧಿ ಅವರ ಪ್ರಯತ್ನವೇ #ಭಾರತಐಕ್ಯತಾಯಾತ್ರೆ.

ಏಕಕಾಲದಲ್ಲಿ ಸುಮಾರು 3,570 ಕಿ.ಮೀ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಇಷ್ಟೊಂದು ಉದ್ದನೆಯ ಪ್ರವಾಸ ಕೈಗೊಂಡಿರುವುದು ಇದೇ ಮೊದಲು. ಈಗಾಗಲೇ 1,000 ಕಿ.ಮೀ ನಡಿಗೆಯನ್ನು ರಾಹುಲ್ ಗಾಂಧಿ ಅವರು ಯಶಸ್ವಿಯಾಗಿ ಮುಗಿಸಿದ್ದಾರೆ. ಅತೀ ಮುಖ್ಯವಾಗಿ ಪಾದಯಾತ್ರೆಗೆ ನಿರೀಕ್ಷೆಗೂ ಮೀರಿದ ಜನಸ್ಪಂದನೆ ವ್ಯಕ್ತವಾಗುತ್ತಿದೆ.
ಬಿಜೆಪಿಯ ದ್ವೇಷ, ಹಿಂಸೆ, ಧರ್ಮ ರಾಜಕಾರಣದಿಂದ ದಲಿತರು, ಮಹಿಳೆಯರು, ಶೋಷಿತರು, ಅಲ್ಪಸಂಖ್ಯಾತ ಸಮುದಾಯದ ಜನ ಭಯದಲ್ಲಿ ಬದುಕುವಂತಾಗಿದೆ. “ಸರ್ವಜನಾಂಗದ ಶಾಂತಿಯ ತೋಟ”ವೆಂಬ ಕುವೆಂಪು ಅವರ ಆಶಯಕ್ಕೆ ವಿರುದ್ಧ ದಿಕ್ಕಿನಲ್ಲಿ ದೇಶ ಸಾಗುತ್ತಿದೆ ಎಂದಿದ್ದಾರೆ.
ಬಿಜೆಪಿಯ ದ್ವೇಷ, ಹಿಂಸೆ, ಧರ್ಮ ರಾಜಕಾರಣದಿಂದ ದಲಿತರು, ಮಹಿಳೆಯರು, ಶೋಷಿತರು, ಅಲ್ಪಸಂಖ್ಯಾತ ಸಮುದಾಯದ ಜನ ಭಯದಲ್ಲಿ ಬದುಕುವಂತಾಗಿದೆ. "ಸರ್ವಜನಾಂಗದ ಶಾಂತಿಯ ತೋಟ"ವೆಂಬ ಕುವೆಂಪು ಅವರ ಆಶಯಕ್ಕೆ ವಿರುದ್ಧ ದಿಕ್ಕಿನಲ್ಲಿ ದೇಶ ಸಾಗುತ್ತಿದೆ. 3/12#BharatJodoYatra
— Siddaramaiah (@siddaramaiah) October 15, 2022
ಇನ್ನು ದೇಶದ ಸ್ವಾತಂತ್ರ್ಯ ಕಾಂಗ್ರೆಸ್ ನ ಹೋರಾಟದ ಫಲ. ಮಹಾತ್ಮ ಗಾಂಧಿ, ನೆಹರು ಆದಿಯಾಗಿ ನಮ್ಮ ಪಕ್ಷದ ಅನೇಕರ ತ್ಯಾಗ, ಬಲಿದಾನ, ಜೈಲುವಾಸದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. 1925ರಲ್ಲಿ ಆರಂಭವಾದ ಆರ್,ಎಸ್,ಎಸ್ ನವರಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಒಬ್ಬನೇ ಒಬ್ಬ ವ್ಯಕ್ತಿ ಇದ್ದಾರ ಎಂದು ಪ್ರಶ್ನಿಸಿದ್ದಾರೆ.