Siddaramaiah | ನೆಹರೂ ಅವರನ್ನು ಮೋದಿ ಅವರಿಗೆ ಹೋಲಿಸಲು ಸಾಧ್ಯವೇ ಇಲ್ಲ
ಬೆಂಗಳೂರು : ನೆಹರೂ ಅವರನ್ನು ನರೇಂದ್ರ ಮೋದಿ ಅವರಿಗೆ ಹೋಲಿಸಲು ಸಾಧ್ಯವೇ ಇಲ್ಲ ಎಂದು ಮತ್ತೆ ಮತ್ತೆ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನೆಹರೂ ಅವರೊಂದಿಗೆ ಮೋದಿ ಹೋಲಿಕೆ ಸಾಧ್ಯವೇ ಇಲ್ಲ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ..
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಾನು ಮಾತ್ರವಲ್ಲ, ನೀವೂ ದ್ರಾವಿಡರೇ ಆಗಿದ್ದೀರಿ. ಈ ಸ್ಪಷ್ಟತೆ ನನಗಿದೆ. ನಾನು ದ್ರಾವಿಡ ಮೂಲವನ್ನು ಉಳಿಸಿಕೊಂಡಿದ್ದೇನೆ, ನೀವು ಮಾತ್ರ ಅಧಿಕಾರದ ದುರಾಸೆಯಿಂದ ಮೂಲವನ್ನು ತೊರೆದು ಪಕ್ಷಾಂತರ ಮಾಡಿದ್ದೀರಿ. ಬೇಗ “ಘರ್ ವಾಪ್‌ಸಿ” ಆಗಿಬಿಡಿ.
ನೆಹರೂ ಅವರನ್ನು ನರೇಂದ್ರ ಮೋದಿ ಅವರಿಗೆ ಹೋಲಿಸಲು ಸಾಧ್ಯವೇ ಇಲ್ಲ ಎಂದು ಮತ್ತೆ ಮತ್ತೆ ಹೇಳುತ್ತೇನೆ. ಇಬ್ಬರು ನಾಯಕರ ಸಾಧನೆ ಬಗ್ಗೆ ಮುಕ್ತ ಚರ್ಚೆಗೆ ನೀವು ಸಿದ್ಧ ಇದ್ದರೆ ನಾನೂ ಸಿದ್ಧನಿದ್ದೇನೆ. ನನ್ನ ಮಾತಿಗೆ ನೀವು ಖರೀದಿಸಿಟ್ಟಿರುವ ‘’ಟ್ರೋಲ್ ಗ್ಯಾಂಗ್’’ ಮೂಲಕ ಉತ್ತರ ಕೊಡಿಸಲು ಹೋಗಬೇಡಿ.
‘ಭಾರತ ಮಾತೆ ತನ್ನ ಭಕ್ತನನ್ನು ಕಳೆದುಕೊಂಡಿದ್ದಾಳೆ, ಶಾಂತಿ ತನ್ನ ರಕ್ಷಕನನ್ನು ಕಳೆದುಕೊಂಡು ಅನಾಥಳಾಗಿದ್ದಾಳೆ, ನಿರಾಶ್ರಿತರು ತನ್ನ ಆಶ್ರಯದಾತನನ್ನು, ಸಾಮಾನ್ಯ ಜನ ತಮ್ಮ ಕಣ್ಮಣಿಯನ್ನು ಕಳೆದುಕೊಂಡಿದ್ದಾರೆ.. ಪರದೆ ಬಿದ್ದಿದೆ’ ಹೀಗೆ ನೆಹರೂ ಸಾವಿಗೆ ವಾಜಪೇಯಿ ಕಂಬನಿ ಮಿಡಿದಿದ್ದನ್ನು ಹಿರಿಯ ಬಿಜೆಪಿ ನಾಯಕರಿಂದ ಕೇಳಿ ತಿಳಿದುಕೊಳ್ಳಿ. 3/11
— Siddaramaiah (@siddaramaiah) May 29, 2022
‘ಭಾರತ ಮಾತೆ ತನ್ನ ಭಕ್ತನನ್ನು ಕಳೆದುಕೊಂಡಿದ್ದಾಳೆ, ಶಾಂತಿ ತನ್ನ ರಕ್ಷಕನನ್ನು ಕಳೆದುಕೊಂಡು ಅನಾಥಳಾಗಿದ್ದಾಳೆ, ನಿರಾಶ್ರಿತರು ತನ್ನ ಆಶ್ರಯದಾತನನ್ನು, ಸಾಮಾನ್ಯ ಜನ ತಮ್ಮ ಕಣ್ಮಣಿಯನ್ನು ಕಳೆದುಕೊಂಡಿದ್ದಾರೆ.. ಪರದೆ ಬಿದ್ದಿದೆ’ ಹೀಗೆ ನೆಹರೂ ಸಾವಿಗೆ ವಾಜಪೇಯಿ ಕಂಬನಿ ಮಿಡಿದಿದ್ದನ್ನು ಹಿರಿಯ ಬಿಜೆಪಿ ನಾಯಕರಿಂದ ಕೇಳಿ ತಿಳಿದುಕೊಳ್ಳಿ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.








