ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೇವಸ್ಥಾನಗಳನ್ನ ಸ್ವತಂತ್ರಗೊಳಿಸೋದು ಮನುವಾದಿಗಳ ಅಜೆಂಡ

Mahesh M Dhandu by Mahesh M Dhandu
January 2, 2022
in Newsbeat, Politics, ರಾಜಕೀಯ
siddaramaiah
Share on FacebookShare on TwitterShare on WhatsappShare on Telegram

ದೇವಸ್ಥಾನಗಳನ್ನ ಸ್ವತಂತ್ರಗೊಳಿಸೋದು ಮನುವಾದಿಗಳ ಅಜೆಂಡ siddaramaiah saaksha tv

ಬೆಂಗಳೂರು: ಸರ್ಕಾರವು ರಾಜ್ಯದ ದೇವಸ್ಥಾನಗಳನ್ನು ಸ್ವತಂತ್ರಗೊಳಿಸುವುದಾಗಿ, ಸ್ವಾಯತ್ತಗೊಳಿಸುವುದಾಗಿ ಹೇಳುತ್ತಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮನುವಾದಿಗಳ ಪುರಾತನ ಅಜೆಂಡ. ಹಾಗಾಗಿ ಜನರು ಇವರ ದುಷ್ಟ ಹುನ್ನಾರಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

Related posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

September 1, 2026
ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

September 1, 2026

ಈ ಕುರಿತು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಧರ್ಮ, ದೇವರು, ದೇವಸ್ಥಾನ, ಮಸೀದಿ, ಚರ್ಚುಗಳ ವಿಷಯದಲ್ಲಿ ರಾಜಕೀಯ ಮಾಡಿಕೊಂಡು ದೇಶವನ್ನು ಅದಾನಿ, ಅಂಬಾನಿ ಮುಂತಾದ ಬಂಡವಾಳಿಗರಿಗೆ ಒತ್ತೆ ಇಡುತ್ತಿರುವ ಬಿಜೆಪಿಯು ಆರಂಭದಿಂದಲೂ ಸುಳ್ಳುಗಳ ಫ್ಯಾಕ್ಟರಿ ಇಟ್ಟುಕೊಂಡು ಸುಳ್ಳುಗಳನ್ನೇ ಉತ್ಪಾದಿಸಿ ಜನರಿಗೆ ಮಾರಿ ರಾಜಕಾರಣ ಮಾಡುತ್ತಿದೆ. ದೇವಸ್ಥಾನಗಳು ಈಗಲೂ ಸ್ವತಂತ್ರವಾಗಿಯೆ ಇವೆ. ಸರ್ಕಾರ ಅನೇಕ ದೇವಸ್ಥಾನಗಳಿಗೆ ನೆರವು ನೀಡುವುದರ ಮೂಲಕ ಅವುಗಳನ್ನು ಪೊರೆಯುತ್ತಿದೆ. ಮುಜರಾಯಿ ಇಲಾಖೆಯ ವಾರ್ಷಿಕ ಬಜೆಟ್ಟು ಸುಮಾರು 350 ಕೋಟಿಗಳಷ್ಟಿದೆ. ಸರ್ಕಾರವೇ ದೇವಸ್ಥಾನಗಳನ್ನು ನಡೆಸುವುದೆಂದರೆ ಸಮಾಜದ ಕಟ್ಟ ಕಡೆಯ ಮನುಷ್ಯರಿಗೂ ಅವುಗಳ ಮೇಲೆ ಹಕ್ಕುಗಳು ಇವೆಯೆಂದು ಅರ್ಥ. ಸರ್ಕಾರ ದೇವಸ್ಥಾನಗಳ ಮೇಲಿನ ಹಿಡಿತವನ್ನು ತಪ್ಪಿಸುವುದೆಂದರೆ ಜನ ಸಮುದಾಯಗಳಿಗೆ ಇರುವ ಅಧಿಕಾರವನ್ನು ತಪ್ಪಿಸುವುದೆಂದು ಅರ್ಥ ಎಂದು ವಿವರಿಸಿದ್ದಾರೆ.

siddaramaiah saaksha tv

ಅಲ್ಲದೆ ಈಗ ಸರ್ಕಾರ ಮಾಡ ಹೊರಟಿರುವುದೇನೆಂದರೆ ನಾಡಿನ ಐದೂವರೆ ಕೋಟಿ ಕನ್ನಡಿಗ ಹಿಂದೂಗಳ ಅಧಿಕಾರವನ್ನು ತಪ್ಪಿಸಿ ಕೇವಲ ಶೇ.ಎರಡರಷ್ಟು ಜನರ ಕೈಗೆ ಕೊಡಲು ಮುಂದಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದು, ಸರ್ಕಾರದ ಈ ನಿರ್ಧಾರದಿಂದ ಶೇ.80 ರಷ್ಟು ಜನ ಮತ್ತೆ ಊಳಿಗಮಾನ್ಯ ಸಮಾಜದ ಕ್ರೌರ್ಯವನ್ನು ಅನುಭವಿಸಬೇಕೆಂದು ಸರ್ಕಾರ ತೀರ್ಮಾನಿಸಿದಂತೆ ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಸವಣ್ಣನವರ ನೇತೃತ್ವದ ಶರಣ ಚಳುವಳಿಯನ್ನು ದಮನ ಮಾಡಿದ ಪುರೋಹಿತಶಾಹಿ ಶಕ್ತಿಗಳೆ ಇಂದು ತಮ್ಮ ಬಿಜೆಪಿ ಪಕ್ಷದಲ್ಲಿರುವ ಶೂದ್ರ ರಾಜಕಾರಣಿಗಳನ್ನು ಬಳಸಿಕೊಂಡು ದೇವಸ್ಥಾನಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡು ಐದೂವರೆ ಕೋಟಿ ಕನ್ನಡಿಗ ಹಿಂದೂಗಳನ್ನು ಧಾರ್ಮಿಕ ಗುಲಾಮಗಿರಿಯ ಕಡೆಗೆ ತಳ್ಳಲು ಪ್ರಯತ್ನಿಸುತ್ತಿವೆ. ಈ ಪುರೋಹಿತ ಶಾಹಿ ವರ್ಗ ಸ್ವಾಯತ್ತತೆಯ ಹೆಸರಲ್ಲಿ ಎಲ್ಲ ದೇವಸ್ಥಾನಗಳನ್ನು ವಶಪಡಿಸಿಕೊಳ್ಳುವುದಿಲ್ಲ. ಲಕ್ಷಾಂತರ, ಕೋಟ್ಯಾಂತರ ಆದಾಯವಿರುವ ದೇವಸ್ಥಾನಗಳನ್ನು ತಾವು ತೆಗೆದುಕೊಂಡು ಆದಾಯವಿಲ್ಲದ ಕೆಲವು ದೇವಸ್ಥಾನಗಳನ್ನು ಉಳಿದವರಿಗೆ ಬಿಟ್ಟುಕೊಡಬಹುದು. ಆದರೆ ಸರ್ಕಾರದ ಹಿಡಿತ ತಪ್ಪಿದ ಕೂಡಲೇ ಮನುವಾದಿ ನಿಯಮಗಳನ್ನು ಸಮಾಜದ ಮೇಲೆ ಹೇರಿಕೆ ಮಾಡಲು ಪ್ರಾರಂಭಿಸುತ್ತಾರೆ. ಈ ವಿಚಾರಗಳನ್ನು ಹೇಳಿದ ಕೂಡಲೇ ಸಂಘ ಪರಿವಾರದವರು ಇನ್ನಿಲ್ಲದಂತೆ ತೊಳಲಾಡುತ್ತಾರೆ.

ತಾವು ಮಾತನಾಡಲಾರದೆ ತಮ್ಮ ಪಕ್ಷದಲ್ಲಿರುವ ಶೂದ್ರಾದಿ ದಲಿತ ನಾಯಕರನ್ನು ಛೂ ಬಿಟ್ಟು ಬಾಯಿಗೆ ಬಂದಂತೆ ಮಾತನಾಡಲು ಸೂಚಿಸುತ್ತಾರೆ. ಈ ಧಾರ್ಮಿಕ ಅನ್ಯಾಯಗಳ ವಿರುದ್ಧ, ಶೋಷಣೆಯ ನೀತಿಗಳ ವಿರುದ್ಧ ಮಾತನಾಡಿದರೆ, ಸಾಮಾಜಿಕ ನ್ಯಾಯ, ಸಂವಿಧಾನದ ಆಶಯಗಳ ಬಗ್ಗೆ ಪ್ರಸ್ತಾಪಿಸಿದ ಕೂಡಲೇ ಹಾಗೆ ಪ್ರಸ್ತಾಪಿಸಿದವರನ್ನು ಹಿಂದೂ ವಿರೋಧ, ಪಾಕಿಸ್ತಾನ, ಮುಸ್ಲಿಂ, ಕ್ರಿಶ್ಚಿಯನ್ ಮುಂತಾದ ವಿಷಯಗಳನ್ನು ಮಾತನಾಡಿ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

Tags: BJPSaakaha TVSiddaramaiah
ShareTweetSendShare
Join us on:

Related Posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

by Shwetha
September 1, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ...

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

by Shwetha
September 1, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಪರಿಷ್ಕೃತ ಮಾಹಿತಿಯನ್ನು ಸಲ್ಲಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗೆ ಸುಪ್ರೀಂ...

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

by Shwetha
September 1, 2026
0

ರಾಜ್ಯದಲ್ಲಿ ವೈರಲ್ ಜ್ವರದ ಪ್ರಕರಣಗಳ ಜೊತೆಗೆ ಮಕ್ಕಳಲ್ಲಿ ಕಾಲು-ಬಾಯಿ ಬೇನೆ (Hand, Foot and Mouth Disease - HFMD) ಸೋಂಕಿನ ಪ್ರಕರಣಗಳೂ ಹೆಚ್ಚಾಗುತ್ತಿವೆ. ವಿಶೇಷವಾಗಿ ಐದು...

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

by Shwetha
September 1, 2026
0

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಈಗ 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ದೊಡ್ಡ ಮಟ್ಟದ ಸಂಘರ್ಷ ಶುರುವಾಗಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು...

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

by Shwetha
September 1, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಮಹತ್ವದ ಮತ್ತು ಭಾವನಾತ್ಮಕ ಘೋಷಣೆಯೊಂದನ್ನು ಮಾಡಿದ್ದಾರೆ. ಇನ್ಮುಂದೆ ತಾವು ಯಾವುದೇ ವಿಧಾನಸಭಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram