ಮೋದಿ ಉಳಿಯಲು ಬಿಟ್ರೆ ಜನ ಭಿಕ್ಷೆ ಬೇಡುವ ಪರಿಸ್ಥಿತಿ ಬರುತ್ತೆ : ಸಿದ್ದರಾಮಯ್ಯ siddaramaiah saaksha tv
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಉಳಿಯಲು ಬಿಟ್ಟರೇ ಜನರು ಭಿಕ್ಷೆ ಬೇಡುವ ಪರಿಸ್ಥಿತಿ ಬರುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಅದರಲ್ಲೂ ಪ್ರಧಾನಿ ಮೋದಿ ವಿರುದ್ಧ ಮುಗಿಬಿದ್ದ ಸಿದ್ದರಾಮಯ್ಯ, ಮೋದಿ ಬರೀ ಸುಳ್ಳು ಹೇಳುತ್ತಾರೆ. ಅವರು ಏನು ಹೇಳಿದರೂ ನಾವು ಉಲ್ಟಾ ಅರ್ಥ ಮಾಡಿಕೊಳ್ಳಬೇಕು ಎಂದು ವ್ಯಂಗ್ಯವಾಡಿದರು.
ಇನ್ನು ಗಾಂಧಿ ಕೊಂದವನನ್ನು ದೇಶಭಕ್ತರು ಎಂದು ಕರೆಯುತ್ತಾರೆ. ಇವರಿಗೆ ನಾಚಿಕೆ ಆಗಬೇಕು. ಇವರು ಎಮರ್ಜೆನ್ಸಿ ಘೋಷಣೆ ಮಾಡಿಲ್ಲ ಅಷ್ಟೇ ಆದರೆ ಅದು ಜಾರಿಯಲ್ಲಿದೆ. ದೇಶದಲ್ಲಿ ಪ್ರಜಾಪ್ರಭುತ್ವ ನಾಶ ಆಗುತ್ತಿದೆ. ಸಂವಿಧಾನಕ್ಕೆ ಗೌರವ ಇಲ್ಲದಂತೆ ಆಗಿದೆ ಎಂದು ಆಕ್ರೋಶ ಹೊರಹಾಕಿದರು.