Siddaramaiah | ನಮ್ಮಲ್ಲಿ ಸಣ್ಣ-ಪುಟ್ಟ ಭಿನ್ನಾಭಿಪ್ರಾಯ ಇರೋದು ಸಹಜ
ಬೆಂಗಳೂರು : ನಮ್ಮ ಪಕ್ಷ ಆಂತರಿಕ ಪ್ರಜಾಪ್ರಭುತ್ವವನ್ನು ಬೆಳೆಸಿಕೊಂಡು ಬಂದಿದೆ, ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇರುವುದು ಸಹಜ ಮತ್ತು ಅದು ಪ್ರಜಾಪ್ರಭುತ್ವದ ಜೀವಂತಿಕೆಯ ಸಂಕೇತ ಕೂಡ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಬಲಾವ್ ನೀಡಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ನಾಯಕರು ದೆಹಲಿಯಲ್ಲಿ ಕಾಂಗ್ರೆಸ್ ವರಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ರಾಜ್ಯದ ಸುಮಾರು 16 ಜನ ಹಿರಿಯ ನಾಯಕರನ್ನು ದೆಹಲಿಗೆ ಕರೆಸಿಕೊಂಡು ರಾಜ್ಯದ ಸದ್ಯದ ಸ್ಥಿತಿಗತಿ, ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅಗತ್ಯವಿರುವ ಸಹಕಾರವನ್ನು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿ ಒಗ್ಗಟ್ಟಿನಿಂದ ನಡೆಸುತ್ತಿರುವ ಹೋರಾಟವನ್ನು ಶ್ಲಾಘಿಸಿದ ರಾಹುಲ್ ಗಾಂಧಿಯವರು, ಇಂತಹ ಹೋರಾಟಗಳನ್ನು ಇನ್ನಷ್ಟು ವ್ಯಾಪಕವಾಗಿ ನಡೆಸಬೇಕೆಂದು ಸಲಹೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಭಿನ್ನಮತ ಇಲ್ಲ. ನಮ್ಮ ಪಕ್ಷ ಆಂತರಿಕ ಪ್ರಜಾಪ್ರಭುತ್ವವನ್ನು ಬೆಳೆಸಿಕೊಂಡು ಬಂದಿದೆ, ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇರುವುದು ಸಹಜ ಮತ್ತು ಅದು ಪ್ರಜಾಪ್ರಭುತ್ವದ ಜೀವಂತಿಕೆಯ ಸಂಕೇತ ಕೂಡ ಎಂದು ಬರೆದುಕೊಂಡಿದ್ದಾರೆ.
siddaramaiah-meet congress high command









