ಮಸ್ಕಿ ಉಪಚುನಾವಣೆಗೆ ಸಿದ್ಧತೆ : ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿ ಕಾಂಗ್ರೆಸ್
ಬೆಂಗಳೂರು : ಮಸ್ಕಿ ಉಪಚುನಾವಣೆಗೆ ರಾಜ್ಯ ಕಾಂಗ್ರೆಸ್ ಸಿದ್ಧತೆ ಆರಂಭಿಸಿದೆ. ಇದರ ಭಾಗವಾಗಿ ಇಂದು ರಾಯಚೂರು ಜಿಲ್ಲೆಯ ಕಾಂಗ್ರೆಸ್ ನಾಯಕರು ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಮಾಲೋಚನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಬಿ.ವಿ.ನಾಯಕ್ ಅವರು, ಸಿದ್ದರಾಮಯ್ಯ ಭೇಟಿ ವೇಳೆ ಮಸ್ಕಿ ಉಪಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಗಿದೆ. ಬೈ ಎಲೆಕ್ಷನ್ ಆದ್ದರಿಂದ ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ ಬಿಜೆಪಿಯ ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿ, ಈ ವಿಚಾರವಾಗಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದೇವೆ.
ಆದ್ರೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಬಸನಗೌಡ ತುರ್ವಿಹಾಳ ಬಳಿ ನೇರವಾಗಿ ನಾವು ಮಾತನಾಡಿಲ್ಲ, ಆದರೆ ಪಕ್ಷ ಸೇರುವ ಬಗ್ಗೆ ಅವರ ಕಾರ್ಯಕರ್ತರ ಬಳಿ ತುರ್ವಿಹಾಳ ಹೇಳುತ್ತಿದ್ದಾರೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದರು.
ಕೊಟ್ಟೂರು ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ
ಉಪಚುನಾವಣೆಯಲ್ಲಿ ತಮ್ಮ ಸೊಸೆ ಶ್ರೀದೇವಿ ನಾಯಕ್ ಸ್ಪರ್ಧಿಸುತ್ತಾರೆ ಎಂಬ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿ, ಮೊದಲು ಜಿಲ್ಲಾ ಮುಖಂಡರ ಅಭಿಪ್ರಾಯ ಪಡೆಯಬೇಕು.
ಆ ನಂತರ ಅದರ ಬಗ್ಗೆ ಚರ್ಚೆ ಮಾಡುತ್ತೇವೆ. ಆದ್ರೆ ಒಂದಂತೂ ಸ್ಪಷ್ಟ ಈ ಸ್ಪರ್ಧೆಯಲ್ಲಿ ನಮ್ಮ ಕುಟುಂಬದಿಂದ ಯಾರು ಇಲ್ಲ ಎಂದರು.
ಇನ್ನು ದೆಹಲಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಂದ ಬಳಿಕ ಅವರನ್ನು ಭೇಟಿ ಮಾಡುವುದಾಗಿ ಇದೇ ವೇಳೆ ಬಿ.ವಿ.ನಾಯಕ್ ತಿಳಿಸಿದರು.
ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ಯುಪಿ ಮಾದರಿ ಅಲ್ಲ : ಸಿದ್ದರಾಮಯ್ಯ
ಸಿದ್ದರಾಮಯ್ಯ ಭೇಟಿ ವೇಳೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ವಿ. ನಾಯಕ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಬಸನಗೌಡ ದದ್ದಲ್, ಡಿ.ಎಸ್ ಹೂಲಗೇರಿ, ಬಸವರಾಜ ಪಾಟೀಲ್ ಇಟಗಿ, ಮಾಜಿ ಶಾಸಕರಾದ ಭೋಸರಾಜು ಮತ್ತಿತರರು ಹಾಜರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel