Siddaramaiah | ಹಿಜಾಬ್ ಬಗ್ಗೆ ಸಿದ್ದರಾಮಯ್ಯ ಸಭೆ : ಬಿಜೆಪಿ ವ್ಯಂಗ್ಯ
ಬೆಂಗಳೂರು : ಹಿಜಾಬ್ ವಿಚಾರದ ಬಗ್ಗೆ ಚರ್ಚಿಸುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಿರಿಯ ನಾಯಕರ ಸಭೆ ಕರೆದಿದ್ದು, ರಾಜ್ಯ ಬಿಜೆಪಿ ಘಟಕ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದೆ.
ಹಿಜಾಬ್ ಬಗ್ಗೆ ಯಾರೂ ಬಹಿರಂಗವಾಗಿ ಮಾತನಾಡಬಾರದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದರು.
ಆದ್ರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಜಾಬ್ ಬಗ್ಗೆ ಮಾತನಾಡಲು ಹಿರಿಯ ನಾಯಕರ ಸಭೆ ಕರೆದಿದ್ದಾರೆ.
ಹೀಗಾಗಿ ಟ್ವಿಟ್ಟರ್ ನಲ್ಲಿ ಬಿಜೆಪಿ ವ್ಯಂಗ್ಯವಾಡಿದ್ದು, ಹಿಜಾಬ್ ವಿಚಾರದ ಬಗ್ಗೆ ಚರ್ಚಿಸುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಿರಿಯ ನಾಯಕರ ಸಭೆ ಕರೆದಿದ್ದಾರೆ.
ಹಿಜಾಬ್ ಬಗ್ಗೆ ಯಾರೂ ಮಾತನಾಡಬಾರದು ಎಂಬ ಡಿ.ಕೆ.ಶಿವಕುಮಾರ್ ಆದೇಶಕ್ಕೆ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ. ಅಸಮರ್ಥ ರಾಜ್ಯಾಧ್ಯಕ್ಷ ಡಿಕೆಶಿ ಅವರೀಗ ಹತಾಶೆಗೆ ಬಿದ್ದಿದ್ದಾರೆ.
ಹಿಜಾಬ್ ಬಗ್ಗೆ ಮಾತನಾಡಬಾರದು ಎಂದು ಜಮೀರ್ ಅವರಿಗೆ ಡಿಕೆಶಿ ಕಟ್ಟಪ್ಪಣೆ ನೀಡಿದ್ದರು.ಆದರೆ ಸಿದ್ದರಾಮಯ್ಯ ಅವರು ಪಕ್ಷದ ವೇದಿಕೆಯಲ್ಲೇ ಹಿಜಾಬ್ ಸಭೆ ಕರೆದಿದ್ದಾರೆ.
ಅದಕ್ಕೆ ಜಮೀರ್ ಅವರನ್ನೂ ಆಹ್ವಾನಿಸಿದ್ದಾರೆ.ಹಾಗಾದರೆ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ ಎಂದು ಕುಟುಕಿದೆ.