Siddaramaiah | ರಾಜ್ಯದ ಹಿತಾಸಕ್ತಿಗಾಗಿ ರಾಜಕೀಯೇತರ ಹೋರಾಟಕ್ಕೆ ನಾವು ಸಿದ್ಧ
ಬೆಂಗಳೂರು : ರಾಜ್ಯದ ಹಿತಾಸಕ್ತಿಗಾಗಿ ರಾಜಕೀಯ ಬದಿಗಿಟ್ಟು ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ. ಕಾವೇರಿ ನೀರು ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಿಯಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿರುದ್ಧ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ವಿಚಾರವಾಗಿ ಟ್ವಿಟ್ಟರ್ ನಲ್ಲಿ ತಮಿಳುನಾಡು ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಜೊತೆಗೆ ಕಾವೇರಿ ವಿವಾದ ಸುಮಾರು ನೂರು ವರ್ಷಗಳ ಹಿಂದಿನದು. ಅಂದಿನದಲೂ ನಮಗೆ ಅನ್ಯಾಯ ಆಗುತ್ತಲೇ ಬಂದಿದೆ. 1892 ರ ಒಪ್ಪಂದ, 1924 ರ ಒಪ್ಪಂದ ಹೀಗೆ ಹಲವಾರು ಬಾರಿ ನಮಗೆ ಅನ್ಯಾಯ ಆಗಿದೆ. ಈಗಲೂ ಅನ್ಯಾಯ ಮಾಡಲು ನೋಡಿದರೆ ಅದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ ಎಂದು ಸ್ಪಷ್ಟಡಿಸಿದ್ದಾರೆ.
ಕಾವೇರಿ ವಿವಾದ ಸುಮಾರು ನೂರು ವರ್ಷಗಳ ಹಿಂದಿನದು. ಅಂದಿನದಲೂ ನಮಗೆ ಅನ್ಯಾಯ ಆಗುತ್ತಲೇ ಬಂದಿದೆ. 1892 ರ ಒಪ್ಪಂದ, 1924 ರ ಒಪ್ಪಂದ ಹೀಗೆ ಹಲವಾರು ಬಾರಿ ನಮಗೆ ಅನ್ಯಾಯ ಆಗಿದೆ.
ಈಗಲೂ ಅನ್ಯಾಯ ಮಾಡಲು ನೋಡಿದರೆ ಅದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. 8/11#Mekedatu— Siddaramaiah (@siddaramaiah) March 22, 2022
ನಾವು ನಮ್ಮ ನೆಲ, ಜಲ, ಭಾಷೆ, ಗಡಿಗೆ ಸಂಬಂಧಿಸಿದ ವಿಷಯಗಳಲ್ಲಿ ರಾಜಕಾರಣ ಮಾಡಿಲ್ಲ, ಮುಂದೆಯೂ ಮಾಡಲ್ಲ. ಮೊನ್ನೆ ಮುಖ್ಯಮಂತ್ರಿಗಳು ಕರೆದ ಸರ್ವಪಕ್ಷಗಳ ಸಭೆಯಲ್ಲಿ ನಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ಹೇಳಿದ್ದೇವೆ. ನಮಗೆ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ.
ತಮಿಳುನಾಡಿನ ನಿರ್ಣಯವನ್ನು ಖಂಡಿಸಿ ನಾವು ಕೂಡ ಖಂಡನಾ ನಿರ್ಣಯವನ್ನು ಮಾಡಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡೋಣ. ಸರ್ವಪಕ್ಷಗಳ ನಿಯೋಗ ತೆಗೆದುಕೊಂಡು ಹೋಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲ ಸಂಪನ್ಮೂಲ ಸಚಿವರ ಮುಂದೆ ವಸ್ತುಸ್ಥಿತಿಯನ್ನು ಹೇಳೋಣ.
ಒಕ್ಕೂಟ ವ್ಯವಸ್ಥೆಯಲ್ಲಿ ಒಕ್ಕೂಟ ಧರ್ಮ ಪಾಲನೆ ಮಾಡಬೇಕಾದುದ್ದು ಕೇಂದ್ರ ಸರ್ಕಾರದ ಕರ್ತವ್ಯ. ರಾಜ್ಯ ಅಭಿವೃದ್ಧಿ ಆದರೆ ಮಾತ್ರ ದೇಶ ಅಭಿವೃದ್ಧಿ ಆಗಲು ಸಾಧ್ಯ.
ರಾಜ್ಯದ ಹಿತಾಸಕ್ತಿಗಾಗಿ ರಾಜಕೀಯ ಬದಿಗಿಟ್ಟು ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ.
ಕಾವೇರಿ ನೀರು ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಿಯಿಲ್ಲ. 11/11#Mekedatu— Siddaramaiah (@siddaramaiah) March 22, 2022
ಒಕ್ಕೂಟ ವ್ಯವಸ್ಥೆಯಲ್ಲಿ ಒಕ್ಕೂಟ ಧರ್ಮ ಪಾಲನೆ ಮಾಡಬೇಕಾದುದ್ದು ಕೇಂದ್ರ ಸರ್ಕಾರದ ಕರ್ತವ್ಯ. ರಾಜ್ಯ ಅಭಿವೃದ್ಧಿ ಆದರೆ ಮಾತ್ರ ದೇಶ ಅಭಿವೃದ್ಧಿ ಆಗಲು ಸಾಧ್ಯ. ರಾಜ್ಯದ ಹಿತಾಸಕ್ತಿಗಾಗಿ ರಾಜಕೀಯ ಬದಿಗಿಟ್ಟು ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ. ಕಾವೇರಿ ನೀರು ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಿಯಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. siddaramaiah-mekedatu congress bjp