ಸಿದ್ದರಾಮಯ್ಯ ಅಧಿಕಾರಕ್ಕೆ ಬರಲ್ಲ : ಸುಧಾಕರ್ Siddaramaiah saaksha tv
ಬೆಂಗಳೂರು : ನಾವು ಅಧಿಕಾರಕ್ಕೆ ಬಂದ ಮೊದಲ ವಾರದಲ್ಲಿಯೇ ಮತಾಂತರ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಡಾ.ಕೆ.ಸುಧಾಕರ್ ಅವರು ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಸಿದ್ದರಾಮಯ್ಯ ಅಧಿಕಾರಕ್ಕೆ ಬರಲ್ಲ. ಮತಾಂತರ ನಿಷೇಧ ಮಸೂದೆ ರದ್ದುಗೊಳಿಸಲು ಆಗುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ನಿನ್ನೆ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಒಂದೇ ವಾರದಲ್ಲಿ ಮತಾಂತರ ವಿಧೇಯಕ ಹಿಂಪಡೆಯುತ್ತೇವೆ. ಮೊದಲ ಅಧಿವೇಶನದಲ್ಲೇ ಮಸೂದೆ ಹಿಂಪಡೆದು ಎಸೆಯುತ್ತೇವೆ ಎಂದು ತಿಳಿಸಿದ್ದರು.









