ಬೆಂಗಳೂರು : ಕೊರೊನಾ ಕಾರಣ ಇಂದಿನಿಂದ ಆರಂಭವಾಗಿರುವ ವಿಧಾನಮಂಡಲ ಅಧಿವೇಶನವನ್ನು ಮೊಟಕುಗೊಳಿಸು ಸರ್ಕಾರ ಮುಂದಾಗಿದೆ.
ಆದ್ರೆ ಇದಕ್ಕೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ಬೆಳಿಗ್ಗೆ ಸದನ ಮೊಟಕುಗೊಳಿಸುವ ಬಗ್ಗೆ ನನ್ನೊಂದಿಗೆ ಮಾತನಾಡಿದ್ದರು.
ಕೊರೊನಾ ಜಾಸ್ತಿ ಆಗುತ್ತಿದೆ ನಿಜ, ಆದರೆ ಅದು ನಿಮ್ಮಿಂದ ಜಾಸ್ತಿ ಆಗುತ್ತಿದೆ ಎಂದು ಹೇಳಿದೆ.
ನಾವು ಅಧಿವೇಶನ ಮೊಟಕುಗೊಳಿಸಲು ಒಪ್ಪುವುದಿಲ್ಲ ಎಂದು ಸ್ಪಷ್ಟಿಸಿದ ಸಿದ್ದು, ಇನ್ನೂ ಮೂರು ವಾರಗಳ ಕಾಲ ಅಧಿವೇಶನ ವಿಸ್ತರಿಸಲು ನಮ್ಮ ಪ್ರಸ್ತಾಪವಿದೆ ಎಂದು ತಿಳಿಸಿದರು.
ಸುಮಾರು 30 ರಿಂದ 40 ಬಿಲ್ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲು ತಂದಿದ್ದಾರೆ.
ಸದನ ಮೊಟಕುಗೊಳಿಸುವುದಾದರೇ ಬಿಲ್ ಗಳನ್ನು ವಾಪಸ್ ಪಡೆಯಲಿ ನೋಡೋಣ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದರು.
ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಅಧಿವೇಶನ ಕಲಾಪವನ್ನು ಕಡಿತಗೊಳಿಸಬೇಕು ಎಂಬ ಅನಿಸಿಕೆ ಇದೆ.
ಈ ಬಗ್ಗೆ ಕಲಾಪ ಸಲಹಾ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಇದಕ್ಕೆ ವಿಪಕ್ಷಗಳ ಸಹಕಾರ ಬೇಕಿದೆ ಎಂದು ತಿಳಿಸಿದ್ದರು.








