ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

 ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ : ಸಿದ್ದರಾಮಯ್ಯ ಆಕ್ರೋಶ

Mahesh M Dhandu by Mahesh M Dhandu
January 20, 2022
in Newsbeat, Politics, ರಾಜಕೀಯ
siddaramaiah
Share on FacebookShare on TwitterShare on WhatsappShare on Telegram

 ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ : ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಜ್ಯದ ಸಚಿವರಾದ ಸುನಿಲ್ ಕುಮಾರ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ಮತ್ತು  ಬಿಜೆಪಿ ನಾಯಕರು ತರಹೇವಾರಿ ಹೇಳಿಕೆಗಳ ಮೂಲಕ ಬಿಜೆಪಿ ಎನ್ನುವುದು ಸುಳ್ಳುಗಳ ಕಾರ್ಖಾನೆ ಎಂದು ಸಾಬೀತುಪಡಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Related posts

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

July 30, 2026
ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

July 30, 2026

ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ ವಿಚಾರವಾಗಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯ, ಸರಣಿ ಟ್ವೀಟ್ ಗಳ ಮೂಲಕ ಬೆಂಕಿಕಾರಿದ್ದಾರೆ.

ಸಿದ್ದರಾಮಯ್ಯ ಟ್ವೀಟ್ ನಲ್ಲಿ…

ಕೇರಳದ ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆಗೆ ಅಲಿಖಿತ ಪೂರ್ವನಿದರ್ಶನ ಕಾರಣ ಎಂದು ಹೇಳಿರುವ ಸಚಿವ ಪ್ರಹ್ಲಾದ ಜೋಷಿಯವರು ‘’ಹೇಳಿಕೆ ನೀಡುವ ಮೊದಲು ದೃಡಪಡಿಸಿಕೊಳ್ಳಬೇಕಿತ್ತು ಎಂದು ನನಗೆ ಪುಕ್ಕಟೆ ಸಲಹೆ ನೀಡಿದ್ದಾರೆ. ದಯವಿಟ್ಟು ಅವರು ಈ ಅಲಿಖಿತ ಪೂರ್ವನಿದರ್ಶನ ಏನು ಎನ್ನುವುದನ್ನು ಸ್ಪಷ್ಟಪಡಿಬೇಕು.

3 ವರ್ಷಗಳಿಗೊಮ್ಮೆ ಮಾತ್ರ ಸ್ತಬ್ಧಚಿತ್ರಕ್ಕೆ ರಾಜ್ಯಗಳಿಗೆ ಅವಕಾಶ ಎನ್ನುತ್ತಾರೆ ರಾಜ್ಯದ ಇಬ್ಬರು ಸಚಿವರು, ಅಲಿಖಿತ ಪೂರ್ವನಿದರ್ಶನ ಇದೆ ಎನ್ನುತ್ತಾರೆ ಕೇಂದ್ರ ಸಚಿವರು, ಕೇರಳ ಸರ್ಕಾರವೇ ನಾರಾಯಣಗುರು ವಿರೋಧಿ ಎನ್ನುತ್ತಾರೆ ಬಿಜೆಪಿ ವಕ್ತಾರರು. ಇದರಲ್ಲಿ ಯಾವುದು ನಿಜ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಬೇಕು.

ಕೇರಳದ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಮಾತ್ರವಲ್ಲ, ಪಶ್ಚಿಮ ಬಂಗಾಳದ ಸುಭಾಷ್ ಚಂದ್ರ ಬೋಸ್ ಸ್ತಬ್ಧ ಚಿತ್ರ ಮತ್ತು ತಮಿಳುನಾಡಿನ ಸ್ವಾತಂತ್ರ್ಯ ಹೋರಾಟಗಾರ ಚಿದಂಬರನರ್ ಸ್ತಬ್ಧ ಚಿತ್ರಗಳನ್ನು ತಿರಸ್ಕರಿಸಲಾಗಿದೆ. ತಿರಸ್ಕೃತ ಮೂರೂ ರಾಜ್ಯಗಳಲ್ಲಿ ಬಿಜೆಪಿಯೇತರ ಪಕ್ಷಗಳ ಸರ್ಕಾರ ಇರುವುದು ಕೇವಲ ಕಾಕತಾಳಿಯ ಎನ್ನುವುದನ್ನು ನಂಬಬಹುದೇ?
7/10

— Siddaramaiah (@siddaramaiah) January 19, 2022

ಗಣರಾಜ್ಯೋತ್ಸವ ಸ್ತಬ್ದಚಿತ್ರಕ್ಕೆ 3 ವರ್ಷಗಳಿಗೊಮ್ಮೆ ಮಾತ್ರ ರಾಜ್ಯಗಳಿಗೆ ಅವಕಾಶ ಎಂದಾದರೆ ನಮ್ಮ ಕರ್ನಾಟಕಕ್ಕೆ ಸತತ 13ನೇ ಬಾರಿ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ಹೇಗೆ ನೀಡಲಾಯಿತು? ಎನ್ನುವುದನ್ನು ಸಚಿವರಾದ ಶ್ರೀನಿವಾಸ ಪೂಜಾರಿ ಮತ್ತು ಸುನೀಲ್ ಕುಮಾರ್ ತಿಳಿಸಬೇಕು. ಇಂತಹ ಹಸಿ ಸುಳ್ಳುಗಳು ಸಚಿವರಿಗೆ ಶೋಭೆ ತರುವುದಿಲ್ಲ.

ಕೇರಳ ಸರ್ಕಾರ ಪ್ರಸ್ತುತ ಪಡಿಸಿದ್ದ ಜಟಾಯು ಸ್ತಬ್ದಚಿತ್ರಕ್ಕೆ ಒಪ್ಪಿಗೆ ನೀಡದೆ, ಅದರ ಮುಂದೆ ಶಂಕರಾಚಾರ್ಯರ ಪ್ರತಿಕೃತಿಯನ್ನು ಕೂರಿಸುವಂತೆ ಕೇಂದ್ರ ಸರ್ಕಾರ ಒತ್ತಡ ಹೇರಲು ಕಾರಣ ಏನು? ಕೇರಳ ಸರ್ಕಾರ ಸೂಚಿಸಿದ ನಾರಾಯಣ ಗುರುಗಳ ಪ್ರತಿಕೃತಿಯನ್ನು ನಿರಾಕರಿಸಲು ಕಾರಣ ಏನು? ಕೇಂದ್ರ ಬಿಜೆಪಿ ಸರ್ಕಾರ ಇದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಶಂಕರಾಚಾರ್ಯರ ಪ್ರತಿಕೃತಿಯ ಸ್ತಬ್ಧ ಚಿತ್ರಕ್ಕೆ ವೈಯಕ್ತಿಕವಾಗಿ ನನ್ನ ವಿರೋಧ ಇಲ್ಲ. ಆದರೆ ಜಾತಿ ಮತ್ತು ಕೋಮು ಸಾಮರಸ್ಯವನ್ನು ಕಾಪಾಡಿಕೊಂಡು ಹೋಗಬೇಕಾದ ಕೇಂದ್ರ ಬಿಜೆಪಿ ಸರ್ಕಾರ, ಅನಗತ್ಯವಾಗಿ ಶಂಕರಾಚಾರ್ಯರ ಎದುರಿಗೆ ನಾರಾಯಣ ಗುರುಗಳನ್ನು ನಿಲ್ಲಿಸಿ ಇಬ್ಬರು ಮಹಾಪುರುಷರ ಅನುಯಾಯಿಗಳ ನಡುವೆ ಜಗಳ ತಂದುಹಾಕುವ ಅಗತ್ಯ ಏನಿತ್ತು.

ಕೇರಳದ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಮಾತ್ರವಲ್ಲ, ಪಶ್ಚಿಮ ಬಂಗಾಳದ ಸುಭಾಷ್ ಚಂದ್ರ ಬೋಸ್ ಸ್ತಬ್ಧ ಚಿತ್ರ ಮತ್ತು ತಮಿಳುನಾಡಿನ ಸ್ವಾತಂತ್ರ್ಯ ಹೋರಾಟಗಾರ ಚಿದಂಬರನರ್ ಸ್ತಬ್ಧ ಚಿತ್ರಗಳನ್ನು ತಿರಸ್ಕರಿಸಲಾಗಿದೆ. ತಿರಸ್ಕೃತ ಮೂರೂ ರಾಜ್ಯಗಳಲ್ಲಿ ಬಿಜೆಪಿಯೇತರ ಪಕ್ಷಗಳ ಸರ್ಕಾರ ಇರುವುದು ಕೇವಲ ಕಾಕತಾಳಿಯ ಎನ್ನುವುದನ್ನು ನಂಬಬಹುದೇ?

ಶಂಕರಾಚಾರ್ಯರ ಪ್ರತಿಕೃತಿಯ ಸ್ತಬ್ಧ ಚಿತ್ರಕ್ಕೆ ವೈಯಕ್ತಿಕವಾಗಿ ನನ್ನ ವಿರೋಧ ಇಲ್ಲ. ಆದರೆ ಜಾತಿ ಮತ್ತು ಕೋಮು ಸಾಮರಸ್ಯವನ್ನು ಕಾಪಾಡಿಕೊಂಡು ಹೋಗಬೇಕಾದ ಕೇಂದ್ರ @BJP4India ಸರ್ಕಾರ, ಅನಗತ್ಯವಾಗಿ ಶಂಕರಾಚಾರ್ಯರ ಎದುರಿಗೆ ನಾರಾಯಣ ಗುರುಗಳನ್ನು ನಿಲ್ಲಿಸಿ ಇಬ್ಬರು ಮಹಾಪುರುಷರ ಅನುಯಾಯಿಗಳ ನಡುವೆ ಜಗಳ ತಂದುಹಾಕುವ ಅಗತ್ಯ ಏನಿತ್ತು?
6/10

— Siddaramaiah (@siddaramaiah) January 19, 2022

ಕೇರಳ ರಾಜ್ಯದಲ್ಲಿ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ನೆಲೆ ಊರಲು ಸಾಧ್ಯವಾಗದಿರುವುದು ಮತ್ತು ನಾರಾಯಣ ಗುರುಗಳ ಅನುಯಾಯಿಗಳೇ ಬಹುಸಂಖ್ಯೆಯಲ್ಲಿರುವ ಆ ರಾಜ್ಯದ ಜನ ಸತತವಾಗಿ ಬಿಜೆಪಿ ಅನ್ನು ತಿರಸ್ಕರಿಸುತ್ತಾ ಬಂದಿರುವುದು ನಾರಾಯಣ ಗುರುಗಳ ಬಗ್ಗೆ ಬಿಜೆಪಿಯ ಪೂರ್ವಾಗ್ರಹಕ್ಕೆ ಕಾರಣ ಇರಬಹುದೇ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ನಾರಾಯಣ ಗುರು, ಸುಭಾಷ್ ಚಂದ್ರ ಬೋಸ್ ಇಲ್ಲವೇ ಚಿದಂಬರನ್ ಅವರ ಬಗ್ಗೆ ಸೈದ್ಧಾಂತಿಕ ಇಲ್ಲವೇ ಬೇರೆ ಕಾರಣಗಳ ವಿರೋಧವಿದ್ದರೆ ಬಿಜೆಪಿ ಧೈರ್ಯದಿಂದ ಅದನ್ನು ವ್ಯಕ್ತಪಡಿಸಬೇಕು. ಇದರ ಬದಲಿಗೆ ತನ್ನ ಸೈದ್ಧಾಂತಿಕ ವಿರೋಧವನ್ನು ಬಚ್ಚಿಟ್ಟುಕೊಂಡು ತಾಂತ್ರಿಕ ಕಾರಣ ನೀಡಿ ತಿಪ್ಪೆ ಸಾರಿಸುವ ಕೆಲಸ ಮಾಡಬಾರದು.

ನಾರಾಯಣ ಗುರು, ಸುಭಾಷ್ ಚಂದ್ರ ಬೋಸ್ ಮಾತ್ರವಲ್ಲ, ಬುದ್ಧ, ಬಸವ, ಅಂಬೇಡ್ಕರ್, ಫುಲೆ, ಪೆರಿಯಾರ್, ಕನಕ, ಕಬೀರ ಸೇರಿದಂತೆ ಈ ನೆಲದ ನಿಜ ಸಮಾಜ ಸುಧಾರಕರನ್ನು ಕೋಮುವಾದಿ-ಜಾತಿವಾದಿ ಬಿಜೆಪಿ ಅಂತರಂಗದಲ್ಲಿ ದ್ವೇಷಿಸುತ್ತದೆ, ಬಹಿರಂಗವಾಗಿ ಕೊಂಡಾಡುತ್ತಾ ನಾಟಕವಾಡುತ್ತದೆ. ಈ ಆತ್ಮವಂಚನೆಯನ್ನು ನಿಲ್ಲಿಸಿ ಎಂದು ಟೀಕೆ ಮಾಡಿದ್ದಾರೆ.

Tags: #Saaksha TVCongressGuru narayanaSiddaramaiah
ShareTweetSendShare
Join us on:

Related Posts

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

by Shwetha
July 30, 2026
0

ದೇಶದಲ್ಲಿ ಜನನ ಮತ್ತು ಮರಣಗಳ ನೋಂದಣಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ–2026' ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ....

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

by Shwetha
July 30, 2026
0

ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ಆಗಸ್ಟ್ 1ರಿಂದ ದೇಶದಾದ್ಯಂತ ರೈಲ್ವೆ ನಿಲ್ದಾಣಗಳ ಮೀಸಲಾತಿ...

ಆಳುವವರು ಮೂರ್ಖರು, ಯುವಕರ ಮಾತು ಕೇಳಲ್ಲ: ಅಮಿತ್ ಶಾ ನನ್ನೆದುರು ನಿಲ್ಲಲು ನಡುಗುತ್ತಾರೆ -ಲೋಕಸಭೆಯಲ್ಲಿ ಮೋದಿ  ಸರ್ಕಾರವನ್ನು ಬೆಂಡೆತ್ತಿದ ರಾಹುಲ್ ಗಾಂಧಿ.

ಆಳುವವರು ಮೂರ್ಖರು, ಯುವಕರ ಮಾತು ಕೇಳಲ್ಲ: ಅಮಿತ್ ಶಾ ನನ್ನೆದುರು ನಿಲ್ಲಲು ನಡುಗುತ್ತಾರೆ -ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಬೆಂಡೆತ್ತಿದ ರಾಹುಲ್ ಗಾಂಧಿ.

by Shwetha
July 30, 2026
0

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಜಂತರ್ ಮಂತರ್ ಬಳಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ವಿಚಾರ ಇದೀಗ ಸಂಸತ್ತಿನಲ್ಲಿ ಭಾರೀ ಕೋಲಾಹಲಕ್ಕೆ...

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

by Shwetha
July 30, 2026
0

ನವದೆಹಲಿ: ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಮತ್ತು ಯುವ ಹೋರಾಟಗಾರ ಸೌರವ್ ದಾಸ್ ನಡುವಿನ ವಾಕ್ಸಮರ ಇದೀಗ...

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

by Shwetha
July 30, 2026
0

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಕನ್ನಡಿಗ ಹಾಗೂ ಸಂಸದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram