Siddaramaiah | ರಾಜ್ಯ ಸಾರಿಗೆ ನಿಗಮಗಳಿಂದ ಹೆಚ್ಚುವರಿ ಹಣ ವಸೂಲಿ : ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು : ಬಲ್ಕ್ ಡೀಸೆಲ್ ಖರೀದಿಯ ಮೇಲೆ ರಾಜ್ಯ ಸಾರಿಗೆ ನಿಗಮಗಳಿಂದ ಹೆಚ್ಚುವರಿಯಾಗಿ 25 ರೂ. ಹಣ ವಸೂಲಿ ಮಾಡುತ್ತಿರುವ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಬಲ್ಕ್ ಡೀಸೆಲ್ ಖರೀದಿಯ ಮೇಲೆ ರಾಜ್ಯ ಸಾರಿಗೆ ನಿಗಮಗಳಿಂದ ಹೆಚ್ಚುವರಿಯಾಗಿ 25 ರೂ. ಹಣ ವಸೂಲಿ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ಕ್ರಮ ಖಂಡನೀಯ. ಈ ಹಗಲು ದರೋಡೆಯನ್ನು ಕೂಡಲೇ ನಿಲ್ಲಿಸುವಂತೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು.
2013-18 ವರೆಗಿನ ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯ ಸಾರಿಗೆಯ ಜನಸ್ನೇಹಿ ಆಡಳಿತಕ್ಕಾಗಿ ಕೇಂದ್ರ ಸರ್ಕಾರವೇ ಹಲವು ಪ್ರಶಸ್ತಿ ನೀಡಿತ್ತು. ಇಡೀ ದೇಶದಲ್ಲಿಯೇ ಅತ್ಯುತ್ತಮ ಸರ್ಕಾರಿ ಸಾರಿಗೆ ಎಂದು ಗುರುತಿಸಲ್ಪಟ್ಟಿದ್ದ ರಾಜ್ಯದ ಸಾರಿಗೆ ವ್ಯವಸ್ಥೆ ಇಂದು ಬಿಜೆಪಿ ಸರ್ಕಾರದ ದುರಾಡಳಿತದಿಂದಾಗಿ ಅವ್ಯವಸ್ಥೆಯ ಆಗರವಾಗಿದೆ.
2013-18 ವರೆಗಿನ ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯ ಸಾರಿಗೆಯ ಜನಸ್ನೇಹಿ ಆಡಳಿತಕ್ಕಾಗಿ ಕೇಂದ್ರ ಸರ್ಕಾರವೇ ಹಲವು ಪ್ರಶಸ್ತಿ ನೀಡಿತ್ತು. ಇಡೀ ದೇಶದಲ್ಲಿಯೇ ಅತ್ಯುತ್ತಮ ಸರ್ಕಾರಿ ಸಾರಿಗೆ ಎಂದು ಗುರುತಿಸಲ್ಪಟ್ಟಿದ್ದ ರಾಜ್ಯದ ಸಾರಿಗೆ ವ್ಯವಸ್ಥೆ ಇಂದು @BJP4Karnataka ಸರ್ಕಾರದ ದುರಾಡಳಿತದಿಂದಾಗಿ ಅವ್ಯವಸ್ಥೆಯ ಆಗರವಾಗಿದೆ. 2/13#KSRTC
— Siddaramaiah (@siddaramaiah) July 1, 2022
ರಾಜ್ಯದ ಕೆಎಸ್‍ಆರ್‌ಟಿಸಿಯ 3 ನಿಗಮಗಳು ಹಾಗೂ ಬಿಎಂಟಿಸಿಯಲ್ಲಿ ಸುಮಾರು 26 ಸಾವಿರ ಬಸ್ ಗಳಿವೆ. ಪ್ರತಿ ದಿನ ಲಕ್ಷಾಂತರ ಕಾರ್ಮಿಕರು, ವಿದ್ಯಾರ್ಥಿಗಳು, ರೈತರು ಹಾಗೂ ಜನಸಾಮಾನ್ಯರು ಸರ್ಕಾರಿ ಬಸ್ಸುಗಳಲ್ಲಿ ಓಡಾಡುತ್ತಿದ್ದಾರೆ. ಸುಮಾರು 1,30,000 ನೌಕರರಿಗೆ ಇವು ಉದ್ಯೋಗ ನೀಡಿವೆ.
ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಂದ ನಿತ್ಯ ಸುಮಾರು 20-25 ಕೋಟಿ ರೂ. ಆದಾಯವಿದ್ದರೂ ಬಿಜೆಪಿ ಸರ್ಕಾರವು ಸಮರ್ಥವಾಗಿ ಸಾರಿಗೆ ವ್ಯವಸ್ಥೆಯನ್ನು ನಿಭಾಯಿಸಲು ವಿಫಲವಾದ ಕಾರಣ ಇಂದು ಇವು ನಷ್ಟದ ಹಾದಿಯಲ್ಲಿವೆ ಎಂದು ಬರೆದುಕೊಂಡಿದ್ದಾರೆ.