ಈದ್ಗಾ ಮೈದಾನದಲ್ಲಿ ಬಕ್ರೀದ್ ಸಂಭ್ರಮದಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ….
ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಹೊಸ ಉಡುಗೆ ತೊಟ್ಟ ಮುಸ್ಲಿಂ ಸಮುದಾಯ ಬೆಳಗ್ಗೆಯೇ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ತೆರಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡು ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭ ಕೋರಿದರು. ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಸಾವಿರಾರು ಮುಸ್ಲಿಂ ಬಂಧುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿ, ಮುಸ್ಲಿಂ ಬಾಂಧವರಿಗೆ ಪವಿತ್ರ ಬಕ್ರೀದ್ ಹಬ್ಬದ ಶುಭ ಕೋರಿದೆ.
ಮಾಜಿ ಸಚಿವರಾದ @BZZameerAhmedK ಅವರು ಸೇರಿದಂತೆ ಸಾವಿರಾರು ಮುಸ್ಲಿಂ ಬಂಧುಗಳು ಈ ಸಂದರ್ಭದಲ್ಲಿ ಹಾಜರಿದ್ದರು. pic.twitter.com/GzAV3hf4It— Siddaramaiah (@siddaramaiah) July 10, 2022