ನ.10 ರ ಬಳಿಕ ಸಿಎಂ ಬದಲಾವಣೆ ಖಚಿತ : ಸಿದ್ದರಾಮಯ್ಯ ವಿಶ್ವಾಸ
ಮೈಸೂರು : ಉಪಚುನಾವಣೆ ಫಲಿತಾಂಶದ ಬಳಿಕ ಅಂದ್ರೆ ನವೆಂಬರ್ 10 ರ ನಂತರ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿದೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಅವರಿಗೆ ಇಷ್ಟ ಇಲ್ಲ. ನನಗೆ ತುಂಬು ನಂಬಿಕೆ ಇದೆ ಯಡಿಯೂರಪ್ಪ ಬದಲಾಗುತ್ತಾರೆ ಎಂಬುದು ಖಚಿತ.
ದೆಹಲಿಯಿಂದ ನನಗೆ ಬಂದಿರುವ ಮಾಹಿತಿ ಆಧಾರದ ಮೇಲೆ ಈ ಮಾಹಿತಿ ನೀಡುತ್ತಿದ್ದೇನೆ ಎಂದರು.
ಮುಖ್ಯಮಂತ್ರಿಗಳ ಬದಲಾವಣೆಗೆ ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪವೂ ಕೂಡ ಒಂದು ಕಾರಣ ಇರಬಹುದು.
ಹಲವು ದಿನದಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ.
ಮೋದಿ ಮುಖ ನೋಡಿ ವೋಟ್ ಹಾಕಲ್ಲ, ಟ್ರಂಪ್ ಸೋಲು ಖಚಿತ : ಸಿದ್ದರಾಮಯ್ಯ
ಹಾಗಾಗಿ ಉಪಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೇಳಗಿಳಿಯುತ್ತಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಶಾಲೆ ಆರಂಭಿಸುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಕೊರೊನಾ ಹಿನ್ನೆಲೆ ಈ ವರ್ಷ ಶಾಲೆಗಳನ್ನ ಆರಂಭಿಸೋದು ಬೇಡ.
ಇದು ಸರ್ಕಾರಕ್ಕೆ ನನ್ನ ವೈಯುಕ್ತಿಕ ಸಲಹೆ. ಆನ್ಲೈನ್ ಕ್ಲಾಸ್ ಮಾಡಿ ಎಲ್ಲರನ್ನು ಪಾಸ್ ಮಾಡಲಿ. ತರಾತುರಿಯಲ್ಲಿ ಶಾಲೆ ಆರಂಭಿಸೋದು ಬೇಡವೆಂದು ಸಲಹೆ ನೀಡಿದರು.

ಬಳಿಕ ಉಪಚುನಾವಣೆಯ ಬಗ್ಗೆ ಮಾತನಾಡಿ, ಎರಡೂ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ.
ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೆಸ್-ಬಿಜೆಪಿ ಸರ್ಕಾರ : ಡಿಕೆಶಿ
ಶಿರಾದಲ್ಲಿ ಜಯಚಂದ್ರ ಗೆಲ್ತಾರೆ. ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








