“ನಮ್ಮಲ್ಲಿರುವುದು ಒಂದೇ ಬಣ ಅದು ಅಖಿಲ ಭಾರತ ಕಾಂಗ್ರೆಸ್ ಬಣ” Siddaramaiah
ಕೊಪ್ಪಳ : ನಮ್ಮಲ್ಲಿರುವುದು ಒಂದೇ ಬಣ ಅದು ಅಖಿಲ ಭಾರತ ಕಾಂಗ್ರೆಸ್ ಬಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡುವ ಸಾಧ್ಯತೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಮ್ಮ ಪಕ್ಷಕ್ಕೆ ದ್ರೋಹ ಮಾಡಿ ಹೋದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ.
ಕಾಂಗ್ರೆಸ್ ಗೆ ಮೋಸ ಮಾಡಿ, ವ್ಯಾಪಾರಕ್ಕಾಗಿ ಬಿಜೆಪಿ ಸೇರಿ ಅಲ್ಲಿ ಸರ್ಕಾರ ರಚನೆಗೆ ಕಾರಣರಾದವರು ಮತ್ತೆ ವಾಪಸ್ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆಯಾಗಲಿ.
ಬಣ ರಾಜಕೀಯವಾಗಲಿ ಇಲ್ಲ. ನಮ್ಮಲ್ಲಿರುವುದು ಒಂದೇ ಬಣ ಅದು ಅಖಿಲ ಭಾರತ ಕಾಂಗ್ರೆಸ್ ಬಣ ಎಂದು ಹೇಳಿದರು.









