ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ, ಲಜ್ಜೆಗೆಟ್ಟವರು : ಸಿದ್ದರಾಮಯ್ಯ
ತುಮಕೂರು : ಬಿಜೆಪಿಯವರಿಗೆ ಮಾನ ಮರ್ಯಾದೆ ಏನೂ ಇಲ್ಲ, ಲಜ್ಜೆಗೆಟ್ಟವರು. ಗ್ರಾಮ ಸ್ವರಾಜ್ ಯಾತ್ರೆ ಮಾಡಲು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬಿಜೆಪಿ ಜನ ಸ್ವರಾಜ್ ಯಾತ್ರೆಯ ಬಗ್ಗೆ ವ್ಯಂಗ್ಯವಾಡಿದರು.
ಜನ ಸ್ವರಾಜ್ ಯಾತ್ರೆ ಎಂದು ಬಿಜೆಪಿಯವರು ಶಂಖ, ಕೊಂಬು ಊದಿಕೊಂಡು ಹೊರಟಿದ್ದಾರೆ.
ಪಾಪ ಶಂಖಕ್ಕೆ ಕೊಂಬುಗೆ ಮರ್ಯಾದೆ ಇದೆ. ಆದ್ರೆ ಇದೀಗ ಬಿಜೆಪಿ ನಾಯಕರು ಮರ್ಯಾದೆ ತೆಗೆಯಲು ಹೊರಟಿದ್ದಾರೆ.
ಬಿಜೆಪಿಯವರಿಗೆ ಮಾನ ಮರ್ಯಾದೆ ಏನೂ ಇಲ್ಲ, ಲಜ್ಜೆಗೆಟ್ಟವರು. ಗ್ರಾಮ ಸ್ವರಾಜ್ ಯಾತ್ರೆ ಮಾಡಲು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.
ಇದೇ ವೇಳೆ ಕೃಷಿ ಕಾನೂನು ವಾಪಸ್ ಪಡೆದ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ.
ಇವತ್ತು ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ. ರೈತರ ಹೋರಾಟದಲ್ಲಿ 700ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ.
ಮೋದಿ ಅವರಿಗೆ ಈಗ ಜ್ಞಾನೋದಯವಾಗಿದ್ದು, ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದಾರೆ. ಅವರು ಮೊದಲೇ ಕಾಯ್ದೆಗಳನ್ನು ವಾಪಸ್ ಪಡೆದಿದ್ದರೇ ರೈತರ ಪ್ರಾಣ ಉಳಿಯುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.