ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಎಸ್ ವೈ ಘೋಷಣೆಯ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿ : ಸಿದ್ದರಾಮಯ್ಯ

Mahesh M Dhandu by Mahesh M Dhandu
May 19, 2021
in Newsbeat, Politics, ರಾಜಕೀಯ
Lockdown
Share on FacebookShare on TwitterShare on WhatsappShare on Telegram

ಬಿಎಸ್ ವೈ ಘೋಷಣೆಯ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿ : ಸಿದ್ದರಾಮಯ್ಯ

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಿದೆ ಜೊತೆಗೆ ಸಂಪೂರ್ಣ ಅವೈಜ್ಞಾನಿಕತೆಯಿಂದ ಕೂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿರುವ ಪ್ಯಾಕೇಜ್ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ಯಾಕೇಜ್ ಘೋಷಿಸುವ ಮುನ್ನ ನೆರೆ ರಾಜ್ಯಗಳನ್ನು ನೋಡಿಯಾದರೂ ಪಾಠ ಕಲಿಯಬೇಕಿತ್ತು. ಜನರ ಮೂಗಿಗೆ ತುಪ್ಪ ಸವರುವ ಪ್ಯಾಕೇಜ್ ಘೋಷಿಸುವ ಮೂಲಕ ಇತರ ರಾಜ್ಯಗಳ ಮುಂದೆ ತಲೆ ತಗ್ಗಿಸುವಂತೆ ಮಾಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಬಡ ಕುಟುಂಬಗಳಿಗೆ ತಲಾ 10 ಕೆ.ಜಿ. ಅಕ್ಕಿ ಮತ್ತು ದುಡಿಯುವ ವರ್ಗದವರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವ ಪ್ಯಾಕೇಜ್ ಘೋಷಣೆ ಮಾಡಿ, ಸಂಪೂರ್ಣ ಲಾಕ್ ಡೌನ್ ಜಾರಿಗೆ ತಂದಿದ್ದರೆ ಇನ್ನಷ್ಟು ಪರಿಣಾಮಕಾರಿಯಾಗಿ ಸೋಂಕು ನಿಯಂತ್ರಿಸಬಹುದಿತ್ತು.

ಮುಖ್ಯಮಂತ್ರಿ ಬಿಜೆಪಿ ಅವರು 1250 ಕೋಟಿ ರೂ. ಪ್ಯಾಕೇಜ್ ಎಂದು ಹೇಳಿದ್ದಾರೆ. ಆದರೆ, ಅವರೇ ಬಿಡುಗಡೆ ಮಾಡಿರುವ ಅಂಕಿ-ಅಂಶಗಳನ್ನು ಗಮನಿಸಿದರೆ ಒಟ್ಟು ಪ್ಯಾಕೇಜ್ ಮೊತ್ತ ರೂ.1111.82 ಕೋಟಿ ಇದೆ. ಉಳಿದ ಹಣಕ್ಕೆ ಲೆಕ್ಕ ಎಲ್ಲಿ ಎಂದು ಪ್ರಶ್ನಿಸಿದ್ದಾರೆ.

ಈ ಪ್ಯಾಕೇಜ್ ನಲ್ಲಿ ಕಟ್ಟಡ ಕಾರ್ಮಿಕರಿಗಾಗಿ 494 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಈ ಹಣ ಕಾರ್ಮಿಕರ ಕಲ್ಯಾಣ ನಿಧಿಯಿಂದ ನೀಡುವಂಥದ್ದು. ಇದು ಕಾರ್ಮಿಕರು ತಮ್ಮ ಕೂಲಿ ಹಣದಲ್ಲಿ ನೀಡಿರುವ ವಂತಿಗೆ. ಹೀಗಾಗಿ ಕಾರ್ಮಿಕರಿಗೆ ನೀಡಿರುವ ಪರಿಹಾರವನ್ನು ಪ್ಯಾಕೇಜ್ ನಲ್ಲಿ ಸೇರಿಸುವುದು ತಪ್ಪು.

ಸಹಕಾರ ಇಲಾಖೆಯಿಂದ ಪಿಎಲ್ ಡಿ ಬ್ಯಾಂಕ್ ಸೇರಿದಂತೆ ಇನ್ನಿತರೆ ಸಹಕಾರ ಬ್ಯಾಂಕ್ ಗಳು ನೀಡಿರುವ ಸಾಲ ವಸೂಲಾತಿ ಗಡುವನ್ನು ಮೂರು ತಿಂಗಳು ಮುಂದೂಡಲಾಗಿದೆ. ಇದನ್ನು ಬಿಜೆಪಿ ಸರ್ಕಾರ ಪರಿಹಾರ ಎಂಬಂತೆ ಬಿಂಬಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

siddaramaiah
ಕಟ್ಟಡ ಕಾರ್ಮಿಕರ ಪರಿಹಾರ ಮತ್ತು ಸಾಲ ವಸೂಲಾತಿ ಮುಂದಕ್ಕೆ ಹಾಕಿರುವುದನ್ನು ಬಿಟ್ಟರೆ ಉಳಿಯವುದು 483.44 ಕೋಟಿ ರೂ. ಮಾತ್ರ. ಇದು ಸಂಕಷ್ಟದಲ್ಲಿರುವ ಇಡೀ ರಾಜ್ಯದ ಜನರಿಗೆ ಯಾವ ರೀತಿಯಲ್ಲಿ ಉಪಯುಕ್ತ ಪ್ಯಾಕೇಜ್ ಆಗಲಿದೆ

ಕಳೆದ ವರ್ಷ ಬಿ.ಎಸ್.ಯಡಿಯೂರಪ್ಪ ಅವರು ರೂ. 2100 ಕೋಟಿ ಪ್ಯಾಕೇಜ್ ಘೋಷಿಸಿದ್ದರು. ಅದರಲ್ಲಿ 850 ಕೋಟಿ ರೂ. ಗಳಷ್ಟು ಕಟ್ಟಡ ಕಾರ್ಮಿಕರ ನಿಧಿಯಿಂದಲೇ ಹಣವನ್ನು ಖರ್ಚು ಮಾಡಿ, ಸರ್ಕಾರ ಸ್ವಂತ ಹಣದಿಂದ ಖರ್ಚು ಮಾಡಿದೆ ಎಂದು ಸುಳ್ಳು ಹೇಳಿದ್ದರು.

ಕಳೆದ ಬಾರಿಯ 2100 ಕೋಟಿ ರೂ.ಗಳ ಪ್ಯಾಕೇಜ್ ನಲ್ಲಿ ಬಹುಪಾಲು ಹಣವನ್ನು ನೊಂದ ಜನರಿಗೆ ನೀಡಲೇ ಇಲ್ಲ. ಆಟೋ, ಕ್ಯಾಬ್, ಚಾಲಕರುಗಳಿಗೆ ಸಂಬಂಧಿಸಿದಂತೆ 7.75 ಲಕ್ಷ ಜನರಿಗೆ ತಲಾ 5 ಸಾವಿರ ಪರಿಹಾರ ಕೊಡುವುದಾಗಿ ಘೋಷಿಸಿ, ನೀಡಿದ್ದು, ಕೇವಲ 2.10 ಲಕ್ಷ ಜನರಿಗೆ ಮಾತ್ರ.

ಕಳೆದ ಬಾರಿ ಸವಿತಾ ಸಮಾಜದ ಶೇ. 50 ಜನರಿಗೂ ಪರಿಹಾರ ಸಿಗಲಿಲ್ಲ. ಅದೇ ರೀತಿ ರೈತರಿಗೆ, ಹೂ ಬೆಳೆಗಾರರಿಗೆ, ಹಣ್ಣು ಬೆಳಗಾರರಿಗೆ ಘೋಷಿಸಿದ್ದ ಪರಿಹಾರದ ಹಣ ಶೇ. 50 ರಷ್ಟು ಜನರನ್ನು ತಲುಪಿಲ್ಲ. ಈ ಬಾರಿಯಾದರೂ ರಾಜ್ಯ ಬಿಜೆಪಿ ಸರ್ಕಾರ ಇವರಿಗೆ ಸೂಕ್ತ ಪರಿಹಾರ ನೀಡಬೇಕಿತ್ತು.

ತಮಿಳುನಾಡಿನಲ್ಲಿ 2 ಕೋಟಿಗೂ ಅಧಿಕ ಕುಟುಂಬಗಳಿಗೆ ತಲಾ 4 ಸಾವಿರ ರೂ.ಗಳ ಪ್ರಕಾರ ಸುಮಾರು 8,368 ಕೋಟಿ ರೂ. ಪರಿಹಾರದ ಪ್ಯಾಕೇಜ್ ಅನ್ನು ಘೋಷಿಸಲಾಗಿದೆ. ಬಡಜನರಿಗೆ ನೆರವಾಗುವ ಇಂಥಾ ಪ್ಯಾಕೇಜ್ ನಮ್ಮ ರಾಜ್ಯದಲ್ಲೂ ಅವಶ್ಯವಾಗಿ ಬೇಕಿತ್ತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್ ಮೇಲಿನ ಉತ್ತರದ ವೇಳೆ ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ, ಕೇರಳ ರಾಜ್ಯಗಳಿಗಿಂತ ನಮ್ಮ ಆರ್ಥಿಕತೆ ಉತ್ತಮವಾಗಿದೆ ಎಂದು ಹೇಳಿದ್ದರು. ಆದರೆ ಈಗ ರಾಜ್ಯದ ಆರ್ಥಿಕ ಸ್ಥಿತಿ ಸರಿ ಇಲ್ಲ ಎನ್ನುತ್ತಿದ್ದಾರೆ. ಇದರಲ್ಲಿ ಯಾವುದು ಸತ್ಯ? ಯಾವುದು ಸುಳ್ಳು?

ತಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರದಿದ್ದರೂ ಆಂಧ್ರ ಪ್ರದೇಶ, ದೆಹಲಿ, ಕೇರಳ ಮುಂತಾದ ರಾಜ್ಯಗಳು ಜನಪರವಾದ ಪ್ಯಾಕೇಜ್‍ಗಳನ್ನು ಘೋಷಿಸಿವೆ. ಆ ರಾಜ್ಯಗಳ ಮುಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಏನೇನೂ ಅಲ್ಲ. ಇದು ಜನರ ಕಣ್ಣಿಗೆ ಮಣ್ಣೆರಚುವ ತಂತ್ರ.

ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ನೇಕಾರರು, ಅಕ್ಕಸಾಲಿಗರು, ಕಮ್ಮಾರರು, ಮಡಿವಾಳರು, ಛಾಯಾಗ್ರಾಹಕರು, ಟೈಲರಿಂಗ್ ವೃತ್ತಿಯವರು, ಸವಿತಾ ಸಮಾಜದವರಿಗೆ ಪರಿಹಾರ ನೀಡಬೇಕು ಮತ್ತು ಸೋಂಕು ನಿಯಂತ್ರಣಕ್ಕೆ ಬರುವವರೆಗೆ ಕಟ್ಟುನಿಟ್ಟಾಗಿ ಲಾ???ಡೌನ್ ಜಾರಿಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

corona cases

Tags: BS YediyurappaCorona VirusSiddaramaiah
ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram