`ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನು ಮಾಡಿದ್ದಾನೋ, ಅದೂ ಅಸಹ್ಯವಾಗಿ’
1 min read
`ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನು ಮಾಡಿದ್ದಾನೋ, ಅದೂ ಅಸಹ್ಯವಾಗಿ’
ಬೆಂಗಳೂರು : ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನು ಮಾಡಿದ್ದಾನೋ, ಅದೂ ಅಸಹ್ಯವಾಗಿ ಎಂದು ಸಿಡಿ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಬಳಿಕ ರಾಜ್ಯದಲ್ಲಿ ಸಿಡಿ ಭಾರಿ ಸದ್ದು ಮಾಡುತ್ತಿದೆ. ರೆಬಲ್ ಶಾಸಕರು ಸಿಎಂ ಬಿಎಸ್ ಯಡಿಯೂರಪ್ಪ ಸಿಡಿ ಬ್ಲಾಕ್ ಮೇಲ್ ಗೆ ಒಳಗಾಗಿದ್ದಾರೆ.
ಅದರಲ್ಲೂ ಬಸನಗೌಡ ಪಾಟೀಲ್ ಯತ್ನಾಳ್ ಒಂದು ಹೆಜ್ಜೆ ಮುಂದೆ ಇಟ್ಟು, ಸಿಎಂ ಬಿ.ಎಸ್.ಯಡಿಯೂರಪ್ಪನವರ ನೋಡಲಾಗದಂತ ಸಿಡಿಗಳು ಇವೆ ಎಂದು ಬಾಂಬ್ ಸಿಡಿಸಿದ್ದಾರೆ.
ಸಿಎಂ ವಿರುದ್ಧ ಸಿಡಿ ಬ್ಲಾಕ್ ಮೇಲ್ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನು ಮಾಡಿದ್ದಾನೋ ಯಾರಿಗೆ ಗೊತ್ತು..?
ಅದೂ ಅಸಹ್ಯವಾಗಿ ಬೇರೆ ಇದೆಯಂತಲ್ಲಪ್ಪ! ಅದು ಗೊತ್ತಾಗ ಬೇಕಲ್ವೆ. ಈ ಬಗ್ಗೆ ತನಿಖೆಯಾಗಬೇಕು. ಸಿಡಿಯಲಿ ಏನೇನು ಮಾಡಿದ್ದಾರೆ ಎನ್ನುವುದು ಬಹಿರಂಗವಾಗಲಿ.
ಎಲ್ಲವೂ ಗೊತ್ತಾಗಬೇಕು ಅಂದರೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನಾಯಕರನ್ನು ಶರತ್ ಬಚ್ಚೇಗೌಡ ಭೇಟಿ ಮಾಡಿದ ಬಗ್ಗೆ ಸಿದ್ದರಾಮಯ್ಯ ಮಾತನಾಡಿ, ಅವರನ್ನು ಪಕ್ಷಕ್ಕೆ ಸೇರಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಇನ್ನೊಂದು 15 ದಿನದಲ್ಲಿ ಈ ಬಗ್ಗೆ ತೀರ್ಮಾನವಾಗುತ್ತದೆ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel