Siddaramaiah | ದೇವರಿಂದಲೂ ಕಮಿಷನ್ ಕೇಳೋದು ಯಾವ ರೀತಿಯ ಧರ್ಮ ರಕ್ಷಣೆ
ಬೆಂಗಳೂರು : ಕಾಂಗ್ರೆಸ್ ಅವಧಿಯ ಭ್ರಷ್ಟಾಚಾರದ ಹಗರಣಗಳನ್ನು ಜನತೆಯ ಮುಂದೆ ಇಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿ.ಬುಟ್ಟಿಯ ಒಳಗಿರುವುದು ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ ಎಂದು ಓಪನ್ ಚಾಲೆಂಜ್ ಹಾಕಿದ್ದಾರೆ.
ಇದೇ ವೇಳೆ ಮಠಗಳಿಗೆ ನೀಡುವ ಅನುದಾನದಲ್ಲಿಯೂ ಕಮಿಷನ್ ನೀಡಬೇಕು ಎಂದು ದಿಂಗಾಲೇಶ್ವರ ಸ್ವಾಮಿಜಿ ಮಾಡಿರುವ ಆರೋಪದ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಧರ್ಮ ರಕ್ಷಕರು ಎಂದು ತಮ್ಮನ್ನು ಕರೆದುಕೊಳ್ಳುವ ಬಿಜೆಪಿಯವರು ಮಠ, ಮಂದಿರಗಳ ಅನುದಾನವನ್ನೂ ಬಿಡದೆ 30% ಕಮಿಷನ್ ತಿಂದು ತೇಗುತ್ತಿರುವುದು ನಾಚಿಕೆಗೇಡು ಎಂದು ಆಕ್ರೋಶ ಹೊರಹಾಕಿದ್ದಾರೆ.
ಅಲ್ಲದೇ 10% ಡಿಸ್ಕೌಂಟ್ ಯಾಕೆ? ಅದನ್ನು ತಿಂದು ಬಿಡಿ ಎಂದು ಕುಟುಕಿರುವ ಸಿದ್ದರಾಮಯ್ಯ, ಬಿಜೆಪಿ ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ ಎಂದು ಪ್ರಶ್ನಿಸಿದ್ದಾರೆ. Siddaramaiah reaction on cm basavaraj bommai statement









