Siddaramaiah | ಪ್ರತಿಯೊಬ್ಬ ಭಾರತೀಯನಿಗೂ ಆರ್ ಎಸ್ ಎಸ್ ಕಂಡರೆ ಭಯ
ಬೆಂಗಳೂರು : ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್ ಎಸ್ ಎಸ್ ಕಂಡರೆ ಭಯ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.
ಆರ್.ಎಸ್.ಎಸ್ ಕಂಡರೆ ಸಿದ್ದರಾಮಯ್ಯಗೆ ಭಯ ಎಂಬ ಸದಾನಂದಗೌಡ ಅವರ ಹೇಳಿಕೆಗೆ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ… ಆರ್.ಎಸ್.ಎಸ್ ಕಂಡರೆ ನನಗೆ ಭಯ ಎಂದು ಮಾಜಿ ಮುಖ್ಯಮಂತ್ರಿ D V ಸದಾನಂದಗೌಡ ಅವರು ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್ ಎಸ್ ಎಸ್ ಕಂಡರೆ ಭಯ ಇದೆ.
ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. D V ಸದಾನಂದಗೌಡ ಅವರು ಯಾಕೆ ತನ್ನ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು.
ಆರ್.ಎಸ್.ಎಸ್ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ ಆರ್ ಎಸ್ ಎಸ್ ಮೇಲೆ ದೇಶದ ಮೊದಲ ಗೃಹಸಚಿವ ವಲ್ಲಭಭಾಯಿ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ.
ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ ಸಮುದಾಯಗಳಂತೆ ನನಗೂ ಆರ್ ಎಸ್ ಎಸ್ ಬಗ್ಗೆ ಭಯ ಇದೆ.
ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ ಸಮುದಾಯಗಳಂತೆ ನನಗೂ @RSSorg ಬಗ್ಗೆ ಭಯ ಇದೆ. 4/8#AryanRSS
— Siddaramaiah (@siddaramaiah) June 2, 2022
ಮೀಸಲಾತಿ, ಭೂಸುಧಾರಣೆಯಂತಹ ಬಹುಸಂಖ್ಯೆಯ ಹಿಂದೂಗಳೇ ಫಲಾನುಭವಿಗಳಾಗಿರುವ ಸಾಮಾಜಿಕ ನ್ಯಾಯದ ಕಾನೂನುಗಳನ್ನೇ ವಿರೋಧಿಸುವ ಆರ್ ಎಸ್ ಎಸ್ ಬಗ್ಗೆ ಭಯವಲ್ಲದೆ ಪ್ರೀತಿ ಇರಲು ಸಾಧ್ಯವೇ?
ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ ಆರ್ ಎಸ್ ಎಸ್ ಬಗ್ಗೆ ಭಯ ಸಹಜ ಅಲ್ಲವೇ ಸದಾನಂದಗೌಡ ಅವರೇ?
ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ ಆತ್ಮಾವಲೋಕನ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ.
ಆರ್.ಎಸ್.ಎಸ್ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ @RSSorg ಮೇಲೆ ದೇಶದ ಮೊದಲ ಗೃಹಸಚಿವ ವಲ್ಲಭಭಾಯಿ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ. 3/8#AryanRSS
— Siddaramaiah (@siddaramaiah) June 2, 2022
ಆರ್.ಎಸ್.ಎಸ್ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ? ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.








