ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾವು ಕೋವಿಡ್ ನಿಯಮ ಪಾಲಿಸಿಕೊಂಡು ಪಾದಯಾತ್ರೆ ಮಾಡ್ತೀವಿ : ಸಿದ್ದರಾಮಯ್ಯ

admin by admin
January 6, 2022
in Newsbeat, Politics, ರಾಜಕೀಯ
Nazir Ahmed

Nazir Ahmed

Share on FacebookShare on TwitterShare on WhatsappShare on Telegram

ನಾವು ಕೋವಿಡ್ ನಿಯಮ ಪಾಲಿಸಿಕೊಂಡು ಪಾದಯಾತ್ರೆ ಮಾಡ್ತೀವಿ : ಸಿದ್ದರಾಮಯ್ಯ siddaramaiah reaction on karnataka covid guidelines saaksha tv

ಬೆಂಗಳೂರು : ನಾವು ಸರ್ಕಾರದ ನಿಯಮಗಳನ್ನು ಗೌರವಿಸಿ, ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಪಾದಯಾತ್ರೆ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026
ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

June 25, 2026

ಕೊರೊನಾ ತಡೆಗೆ ರಾಜ್ಯ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹಾಫ್ ಲಾಕ್ ಡೌನ್ ಜಾರಿ ಮಾಡಿದ್ದು, ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾವು ಪಾದಯಾತ್ರೆ ಮಾಡಿದರೆ ಬಿಜೆಪಿ ಸರ್ಕಾರ ಜನರೆದುರು ಬೆತ್ತಲಾಗಲಿದೆ. ಹೀಗಾಗಿಯೇ ನಾವು ಪಾದಯಾತ್ರೆ ಮಾಡಬಾರದು ಎಂದು ಕೊವಿಡ್ ನಿರ್ಬಂಧಗಳೆಂಬ ಷಡ್ಯಂತ್ರ ರೂಪಿಸಿದ್ದಾರೆ. ಆದರೂ ನಾವು ಸರ್ಕಾರದ ನಿಯಮಗಳನ್ನು ಗೌರವಿಸಿ, ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಪಾದಯಾತ್ರೆ ಮಾಡುತ್ತೇವೆ.

ನಮ್ಮ ಪಾದಯಾತ್ರೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕನಿಷ್ಠ ಅಂತರ ಕಾಪಾಡಿಕೊಳ್ಳುವುದು, ಗ್ಲೌಸ್, ಸ್ಯಾನಿಟೈಸರ್ ಬಳಕೆ ಹೀಗೆ ಎಲ್ಲಾ ರೀತಿಯ ಕೊವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಾರೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕು ತಡೆಗಟ್ಟುವುದೇ ರಾಜ್ಯ ಬಿಜೆಪಿ ಸರ್ಕಾರದ ನಿಜವಾದ ಉದ್ದೇಶವಾಗಿದ್ದರೆ ಮುಖ್ಯಮಂತ್ರಿಗಳು ನಿನ್ನೆ ರಾಮನಗರದಲ್ಲಿ, ಇಂದು ನಾಗಮಂಗಲದಲ್ಲಿ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದರೇ?ತಮ್ಮದೇ ಸರ್ಕಾರದ ನಿಯಮಗಳನ್ನು ಗೌರವಿಸದ ಮುಖ್ಯಮಂತ್ರಿಯನ್ನು ಬೇರೆ ಎಲ್ಲಾದರೂ ನೋಡಿದ್ದೀರ?

ರಾಜ್ಯದ ಯಾವೊಬ್ಬ ವ್ಯಕ್ತಿಗೂ ಕೊರೊನಾ ಬರಬಾರದು ಎಂಬುದು ನಮ್ಮ ಆಶಯವೂ ಹೌದು. ಆದರೆ ಬಿಜೆಪಿ ಸರ್ಕಾರ ನಿಬಂಧನೆಗಳನ್ನು ಹೇರಿರುವ ಹಿಂದೆ ಬೇರೆಯೇ ಉದ್ದೇಶ ಇದೆ. ಅವರ ಈ ಷಡ್ಯಂತ್ರವನ್ನು ಬಯಲು ಮಾಡುತ್ತೇವೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮೇಕೆದಾಟು ಯೋಜನೆ ಜಾರಿಮಾಡಬಾರದು ಎಂದು ಪ್ರತಿಭಟನೆಗೆ ಕೂತಿರುವುದೇ ರಾಜ್ಯ ಮತ್ತು ಕೇಂದ್ರದ ಬಿಜೆಪಿ ನಾಯಕರ ಬೆಂಬಲದ ಮೇರೆಗೆ. ಬಿಜೆಪಿ ನಾಯಕರು ತಮಿಳುನಾಡಿನಲ್ಲಿ ತಮ್ಮ ಪಕ್ಷದ ಬಲವರ್ಧನೆಗೆ ರಾಜ್ಯದ ಹಿತಾಸಕ್ತಿ ಬಲಿಕೊಡಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.

siddaramaiah reaction on karnataka covid guidelines saaksha tv

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಒಮ್ಮೆ ಮೇಕೆದಾಟು ವಿಚಾರ ಪ್ರಸ್ತಾಪ ಮಾಡಿದ್ದು ಬಿಟ್ಟರೆ ಬಿಜೆಪಿಯವರು ಈವರೆಗೆ ಎಲ್ಲಿಯೂ ಮೇಕೆದಾಟು ಬಗ್ಗೆ ಮಾತನಾಡಿಲ್ಲ, ಯೋಜನೆ ಅನುಷ್ಠಾನಕ್ಕೆ ಆಸಕ್ತಿ ತೋರಿಸಿಲ್ಲ. ಬಿಜೆಪಿ ಈ ಯೋಜನೆಯ ಬಗ್ಗೆ ತನ್ನ ನಿಲುವು ಏನೆಂದು ಮೊದಲು ಸ್ಪಷ್ಟಪಡಿಸಲಿ.

ಬೆಂಗಳೂರು ನಗರದ 30% ಜನರಿಗೆ ಈಗಲೂ ಕಾವೇರಿ ನೀರು ಸಿಗುತ್ತಿಲ್ಲ. ಸುಮಾರು ಎರಡೂವರೆ ಕೋಟಿ ಜನರಿಗೆ ಅನುಕೂಲವಾಗುವಂತ ಇಂತಹ ಮಹತ್ವದ ಯೋಜನೆ ಜಾರಿ ಮಾಡದೆ ಬಿಜೆಪಿ ಸರ್ಕಾರ ಕಾಲಾಹರಣ ಮಾಡುತ್ತಿದೆ. ಇದನ್ನು ವಿರೋಧಿಸುವುದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಮ್ಮ ಕರ್ತವ್ಯ.

ಕೊರೊನಾ ಮೂರನೇ ಅಲೆಯ ನಿರೀಕ್ಷೆ ಇದ್ದರೂ ಸರಿಯಾದ ತಪಾಸಣೆ ನಡೆಸದೆ, ಅಂತರರಾಷ್ಟ್ರೀಯ ವಿಮಾನ ಸಂಚಾರ ತಡೆಯದೆ, ಮಾಸ್ಕ್ ಬಳಕೆ ಕಟ್ಟುನಿಟ್ಟು ಮಾಡದೆ ಈಗ ವಿರೋಧ ಪಕ್ಷವೊಂದು ತನ್ನ ಜವಾಬ್ದಾರಿ ನಿರ್ವಹಿಸಲು ಹೊರಟಾಗ ದುರುದ್ದೇಶದಿಂದ ನಿರ್ಬಂಧಗಳನ್ನು ಹೇರಿರುವುದು ಖಂಡನೀಯ.

ನಾವು ಪಾದಯಾತ್ರೆ ಘೋಷಣೆ ಮಾಡಿದ್ದು ಸರ್ಕಾರ ಕೊವಿಡ್ ನಿರ್ಬಂಧಗಳನ್ನು ಹೇರಿದ ಮೇಲಲ್ಲ. ತಿಂಗಳ ಮೊದಲೇ ದಿನಾಂಕ ನಿಗದಿ ಮಾಡಿ, ಅಗತ್ಯ ತಯಾರಿ ಮಾಡಿಕೊಂಡಿದ್ದೇವೆ. ನಮ್ಮನ್ನೇ ಗುರಿಮಾಡಿ ನಿಯಮ ಹೇರಿದರೆ ನಾವು ಹೆದರಿ ಪಾದಯಾತ್ರೆ ಕೈಬಿಡೋಕಾಗುತ್ತಾ?

144 ಸೆಕ್ಷನ್ ಹೇರಿದರೆ ಐದಕ್ಕಿಂತ ಹೆಚ್ಚು ಮಂದಿ ಸೇರಬಾರದು ಎಂದಿದೆಯಲ್ವಾ? ನಾನು, ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಸೇರಿ ನಾಲ್ಕೇ ಮಂದಿ ನಡೆದುಕೊಂಡು ಹೋಗ್ತೇವೆ. ಆಗಲೂ ನಮ್ಮನ್ನು ತಡೆಯುತ್ತಾರಾ? ಬಲಪ್ರಯೋಗ ಮಾಡಿದರೆ ನಮ್ಮ ಸಂವಿಧಾನದತ್ತ ಹಕ್ಕುಗಳನ್ನು ಉಲ್ಲಂಘನೆ ಮಾಡಿದ ಹಾಗಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

Tags: #Saaksha TVBJPCongressCorona VirusSiddaramaiahTamil Nadu
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram