Siddaramaiah | ಧರ್ಮಸ್ಥಳದಲ್ಲಿ ದಲಿತ ಯುವಕನ ಹತ್ಯೆ ಅತ್ಯಂತ ಖಂಡನೀಯ
ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿರುವ ದಲಿತ ಯುವಕ ದಿನೇಶ್ ಅವರ ಹತ್ಯೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಧರ್ಮಸ್ಥಳದಲ್ಲಿ ನಡೆದಿರುವ ದಲಿತ ಯುವಕ ದಿನೇಶ್ ಅವರ ಹತ್ಯೆ ಅತ್ಯಂತ ಖಂಡನೀಯ.
ಕೊಲೆ ಆರೋಪಿ ಬಜರಂಗ ದಳದ ನಾಯಕನಾಗಿರುವ ಕಾರಣಕ್ಕೆ ಮೃತನ ಕುಟುಂಬ ಆತಂಕಕ್ಕೀಡಾಗಿದೆ.
ಪೊಲೀಸರು ರಾಜಕೀಯ ಪ್ರಭಾವಕ್ಕೆ ಮಣಿಯದೆ ಕೊಲೆ ಆರೋಪಿಯನ್ನು ತಕ್ಷಣ ಬಂಧಿಸಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕು.
ಹಿಂದುಗಳ ರಕ್ಷಣೆಯ ಮಂತ್ರ ಜಪಿಸುತ್ತಿರುವ ಬಿಜೆಪಿ ಧರ್ಮಸ್ಥಳದ ದಲಿತ ಯುವಕನ ಹತ್ಯೆಕೋರನ ರಕ್ಷಣೆಗೆ ನಿಂತಿರುವುದು ಆತ್ಮವಂಚನೆಯ ನಡವಳಿಕೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಾವಿನ ರಾಜಕೀಯ ಮಾಡಲು ಹೋಗದೆ ಮೃತಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ. siddaramaiah-reaction on mangalore murder case









