ಯಡಿಯೂರಪ್ಪ ಮತ್ತು ಮೋದಿ ಎಳೆ ಕಡಸುಗಳಾ? : ಸಿದ್ದರಾಮಯ್ಯ
siddaramaiah reacts puttaswamy statement
ತುಮಕೂರು : ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ, ಹಾಗಾದರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಿನ್ನೆ ಶಿರಾ ಬೈ ಎಲೆಕ್ಷನ್ ಪ್ರಚಾರದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಬಿ.ಜೆ ಪುಟ್ಟಸ್ವಾಮಿ ಏಳು ಸಾರಿ ಗೆದ್ದಿರುವ ಜಯಚಂದ್ರ ಅವರು ಮುದಿ ಎತ್ತು ಎಂದು ಹೇಳಿಕೆ ನೀಡಿದ್ದರು.
ಇದಕ್ಕೆ ಇಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ, ಹಾಗಾದರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ? ಎಂದು ಪ್ರಶ್ನಿಸಿದ್ದಾರೆ.
ಮುಂದಿನ ಸಿಎಂ ಅಭ್ಯರ್ಥಿ ಬಗ್ಗೆ ಸಿದ್ದರಾಮಯ್ಯ ಟ್ವೀಟ್
ಸದ್ಯ ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಸಾಕಷ್ಟು ಚರ್ಚೆಗಳು ಆಗುತ್ತಿವೆ. ಮಾಜಿ ಸಚಿವ ಜಮೀರ್ ಮುಂದಿನ ಸಿಎಂ ಸಿದ್ದರಾಮಯ್ಯನವರೇ ಎಂದರೇ, ಶಾಸಕಿ ಸೌಮ್ಯ ರೆಡ್ಡಿ ನೂರಕ್ಕೆ ನೂರು ಡಿ.ಕೆ.ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಇದು ಪಕ್ಷದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ : ಗೂಂಡಾಗಿರಿಗೆ ನಾವು ಹೆದರುವವರಲ್ಲ.. ಹುಷಾರ್ ! : ಸಿದ್ದರಾಮಯ್ಯ
ಈ ವಿಚಾರವಾಗಿಯೂ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ಹಾಗೂ ಶಾಸಕರು ನಿರ್ಧರಿಸುತ್ತಾರೆ.
ಕೆಲವರು ಅಭಿಮಾನದಿಂದ ಇವ್ರೆ ನಮ್ಮ ಮುಂದಿನ ಮುಖ್ಯಮಂತ್ರಿ ಅಂತ ಹೇಳ್ತಾರೆ, ಅವರಿಗೆಲ್ಲ ಮಾತಾಡ್ಬೇಡಿ ಅಂತ ಹೇಳೋಕಾಗುತ್ತಾ? ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಬಿಜೆಪಿ ಮುಖಂಡ ಹೇಳಿದ್ದೇನು..?
ನಿನ್ನೆ ಶಿರಾದಲ್ಲಿ ಸುದ್ದಿಗಾರರೊಂದಿಗೆ ರಾಜ್ಯ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಮಾತನಾಡುತ್ತ, ಮತದಾರರು ಯುವ ಎತ್ತಿಗೆ ಮತ ನೀಡಿದರೆ, ಕ್ಷೇತ್ರಕ್ಕೆ ಪ್ರಯೋಜನವಾಗಲಿದೆ.
ಏಳು ಬಾರಿ ಗೆದ್ದಿರುವ ಟಿ.ಬಿ. ಜಯಚಂದ್ರ ಮುದಿ ಎತ್ತು ಇದ್ದಂತೆ ಇದ್ದಾರೆ. ಹೀಗಾಗಿ ಯುವ ಎತ್ತಿಗೆ ಮತ ನೀಡಿ, ಕ್ಷೇತ್ರದ ಅಭಿವೃದ್ಧಿಯ ಕೆಲಸಗಳು ಆಗುವಂತೆ ಮಾಡಬೇಕು ಎಂದು ಮನವಿ ಮಾಡಿದ್ದರು.
ಇದನ್ನೂ ಓದಿ : ಗ್ರಾಪಂ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧ : ಕೆ.ಎಸ್.ಈಶ್ವರಪ್ಪ
ಮುಂದುವರಿದು ಕಾಂಗ್ರೆಸ್ ಜೆಡಿಎಸ್ ವಿರುದ್ಧ ಕಿಡಿಕಾರಿದ್ದ ಪುಟ್ಟಸ್ವಾಮಿ, ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರ ವೈಯಕ್ತಿಕ ದ್ವೇಷದಿಂದಾಗಿ ಕಾಂಗ್ರೆಸ್ – ಜೆಡಿಎಸ್ ಸರ್ಕಾರ ಪತನವಾಗಿದೆ.
ಸರ್ಕಾರ ಬಿದ್ದು ಒಂದು ವರ್ಷ ಕಳೆದರೂ ಇವರ ಅಸಮಾಧಾನ ಇನ್ನೂ ನಿಂತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಬಳಿ ಅಭಿವೃದ್ಧಿ ಮಂತ್ರ ಇಲ್ಲ. ಸಿಎಂ ಯಡಿಯೂರಪ್ಪ ಅವರು ಹಗಲಿರುಳು ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದ್ದಾರೆ.
ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಾಗೂ ಯಡಿಯೂರಪ್ಪ ಅವರು ಸಾಕಷ್ಟು ಜನಪರ ಸೇವೆ ಮಾಡಿದ್ದಾರೆ. ಇವರಿಬ್ಬರೂ ಇಲ್ಲದಿದ್ದರೆ ಜನರ ಪರಸ್ಥಿತಿ ಗಂಭೀರವಾಗಿರುತ್ತಿತ್ತು ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel