ಮೈ ಕೈ ನೋವು : ವಿಶ್ರಾಂತಿಗಾಗಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್
ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಇಂದಿನಿಂದ ಪಾದಯಾತ್ರೆ ಹಮ್ಮಿಕೊಂಡಿದೆ.
ಇದರಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ದಾರಿ ಮಧ್ಯೆ ಸುಸ್ತಾಗಿದ್ದು, ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಇಂದು ಸಂಗಮದಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ದೊರಕಿತು. ಅಲ್ಲಿಂದ ಕಾಂಗ್ರೆಸ್ ನಾಯಕರು ಪಾದಯಾತ್ರೆ ಹೊರಟರು.
ನಾಲ್ಕು ಕಿಲೋ ಮೀಟರ್ ನಡೆಯುಷ್ಟರಲ್ಲಿ ಸಿದ್ದರಾಮಯ್ಯ ಅವರಿಗೆ ಮೈ ಕೈ ನೋವು, ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿಗಾಗಿ ಅವರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಸಿದ್ದರಾಮಯ್ಯ ಎರಡು ದಿನಗಳ ಹಿಂದಷ್ಟೆ ಬೂಸ್ಟರ್ ಡೋಸ್ ಪಡೆದುಕೊಂಡಿದ್ದು, ಒಂದು ಪಾದಯಾತ್ರೆಗೆ ಮುಂದಾಗಿದ್ದರು.
ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯ ಅವರು ಹೆಗ್ಗನೂರು ತಲುಪಿದ ಬಳಿಕ ಭೋಜನ ವಿರಾಮ ಪಡೆದುಕೊಂಡಿದ್ದಾರೆ.
ಈ ವೇಳೆ ಅವರಿಗೆ ಸುಸ್ತು ಹಾಗೂ ಮೈ ಕೈ ನೋವು ಕಾಣಿಸಿಕೊಂಡಿದ್ದು, ವೈದ್ಯರು ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಹೀಗಾಗಿ ಬೆಂಗಳೂರಿನತ್ತ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.








