ಸಿದ್ದರಾಮಯ್ಯ ( siddaramaiah saaksha tv ) ವಿಪಕ್ಷ ನಾಯಕ ಸ್ಥಾನ ಕಳೆದುಕೊಳ್ತಾರೆ : ಎಸ್.ಟಿ.ಸೋಮಶೇಖರ್
ಮಂಡ್ಯ : 2023ರ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಲಿದೆ. ಆಗ ಸಿದ್ದರಾಮಯ್ಯ ಅವರು ತಮ್ಮ ವಿಪಕ್ಷ ನಾಯಕ ಸ್ಥಾನ ಕಳೆದುಕೊಳ್ಳಲಿದ್ದಾರೆ ನೋಡ್ತಾ ಇರಿ ಎಂದು ಸಚಿವ ಎಸ್ ಟಿ ಸೋಮಶೇಖರ್ ಭವಿಷ್ಯ ನುಡಿದಿದ್ದಾರೆ.
ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬೊಮ್ಮಾಯಿ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಅವರಿಗೇನ್ ಗೊತ್ತಿದೆರೀ.. ವಿರೋಧ ಮಾಡೋದು ಒಂದೇ ಗೊತ್ತಿರೋದು ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗುತ್ತಾ ಮಾತು ಆರಂಭಿಸಿದ ಸೋಮಶೇಖರ್, ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಅಧಿಕಾರಕ್ಕೆ ಬಂದ ನಂತ್ರ ಎಲ್ಲಾ ಜಿಲ್ಲೆಗಳಿಗೆ ಸಚಿವರು ಟೂರ್ ಮಾಡ್ತಾ ಇದ್ದಾರೆ.
ಏನ್ ಏನ್ ಬೇಕೋ ಎಲ್ಲಾ ವ್ಯವಸ್ಥೆ ಮಾಡ್ತಾ ಇದ್ದಾರೆ. 2023ರ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವ, ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಮತ್ತೆ ಬಿಜೆಪಿ ಪಕ್ಷ ಭರ್ಜರಿ ಗೆಲುವನ್ನು ಸಾಧಿಸಲಿದೆ ಎಂದು ಗರಂ ಆದರು.









