ತಿಪ್ಪರಲಾಗ ಹಾಕಿದ್ರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ : ಸಿದ್ದರಾಮಯ್ಯ
ಮೈಸೂರು : ಮುಂದೆ ಕಾಂಗ್ರೆಸ್ಸೇ ಅಧಿಕಾರಕ್ಕೆ ಬರೋದು. ತಪ್ಪರಲಾಗ ಹಾಕಿದ್ರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರೋದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಚಲ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು ನಗರದ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ವರುಣಾ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಿಗೆ ಗ್ರಾಮ ಜನಾಧಿಕಾರ ಸನ್ಮಾನ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಮತ್ತು ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದರು.
ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. 100 ಕ್ಕೆ 70ರಷ್ಟು ಕಾಂಗ್ರೆಸ್ ಬೆಂಬಲಿಗರು ಗೆದ್ದಿದ್ದಾರೆ. ಹಾಗಾಗಿ ಅವರನ್ನು ತಮ್ಮತ್ತ ಸೆಳೆದುಕೊಳ್ಳಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆಯಾಗಿ ಕಾಂಗ್ರೆಸ್ ಒಂದನೇ ಸ್ಥಾನದಲ್ಲಿದ್ದು, ಬಿಜೆಪಿ ಎರಡನೇ ಸ್ಥಾನದಲ್ಲಿದ್ದರೆ, ಜೆಡಿಎಸ್ ಮೂರನೇ ಸ್ಥಾನದಲ್ಲಿದೆ. ಇದನ್ನೇ ಆಧಾರವಾಗಿಟ್ಟುಕೊಂಡರೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಬಿಜೆಪಿಗೆ ಹೋದ 17 ಶಾಸಕರನ್ನು ನೆನಪಿಸಿಕೊಂಡ ಸಿದ್ದರಾಮಯ್ಯ, 17 ಶಾಸಕರಿಗೆ ಹಣ, ಅಧಿಕಾರ ಕೋಡುತ್ತೀವಿ ಅಂದಿದ್ದಕ್ಕೆ ಹೋದರು. ಅವರಿಗೆ ಮಾನ ಮರ್ಯಾದೆ ಇಲ್ಲ. ಅದಕ್ಕೆ ಅವರು ಬಿಜೆಪಿಗೆ ಹೋದರು.
ನೀವು ಹಾಗೆಲ್ಲ ಮಾಡಬೇಡಿ. ನಿಮಗೆ ಮಾನ ಮರ್ಯಾದೆ ಇದೆ ಪಕ್ಷ ಬಿಟ್ಟು ಹೋಗಬೇಡಿ, ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel