ಕರ್ನಾಟಕ ರತ್ನ ಪ್ರಧಾನ- ಅಧಿಕೃತ ಆಹ್ವಾನವಿಲ್ಲ. ಹೋಗಲ್ಲ ಎಂದ ಸಿದ್ದರಾಮಯ್ಯ….
ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಶುರುವಾಗಿದ್ದು ತಮಿಳು ನಟ ರಜನಿಕಾಂತ್ ಸೇರಿದಂತೆ ತೆಲುಗು ನಟ ಜೂನಿಯರ್ ಎನ್ ಟಿ ಆರ್ ಪ್ರಮುಖ ಅತಿಥಿಗಳಾಗಿ ಆಗಮಿಸಿದ್ದಾರೆ.
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಹೆಸರಿದ್ದರೂ ತಾವು ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. “ಶಿಷ್ಟಾಚಾರದಂತೆ ಅವರು ನನಗೆ ಆಹ್ವಾನ ನೀಡಬೇಕಿತ್ತು. ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದರೆ ಹೇಗೆ ಹೋಗುವುದಕ್ಕೆ ಸಾಧ್ಯ? ಅವರು ನನಗೆ ಆಹ್ವಾನ ನೀಡಿಲ್ಲ. ಹಾಗಾಗಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದಾರೆ ಸಿದ್ಧರಾಮಯ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ವಿಧಾನ ಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೌರವ ಉಪಸ್ಥಿತಿ ಇರಲಿದೆ. ಸಚಿವರಾದ ಆರ್. ಅಶೋಕ್ ಹಾಗೂ ವಿ ಸುನೀಲ್ ಕುಮಾರ್ ಅವರ ಘನ ಉಪಸ್ಥಿತಿ ಮತ್ತು ಹಲವರು ಅತಿಥಿಗಳಾಗಿ ಆಗಮಿಸಲಿದ್ದಾರೆ.
siddaramaiah said ” no official invitation so he will not go to karnataka ratna pradhan program