ಬೆಂಗಳೂರು : ರಾಜ್ಯ ವಿಧಾನಸಭೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಸಿಎಂ ಗಾದಿಗಾಗಿ ಪೈಪೋಟಿ ಕೂಡ ಜೋರಾಗಿದೆ. ಈ ವಿಚಾರವಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಗುದ್ದಾಟ ಈಗಿನಿಂದಲೇ ಶುರುವಾಗಿದ್ದು, ಮಾಜಿ ಸಿಎಂ ಬಹಿರಂಗ ಹೇಳಿಕೆ ನೀಡಿದ್ದಾರೆ.
ಎನ್ಡಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಸಿದ್ದರಾಮಯ್ಯ, ನಾನು ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ. ಡಿಕೆ ಶಿವಕುಮಾರ್ ಕೂಡ ಆಕಾಂಕ್ಷಿ. ಆದರೆ, ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆ ನೀಡಲಾರದು ಎಂದು ಹೇಳಿದ್ದಾರೆ.
2020ರಲ್ಲಿ ದಿನೇಶ್ ಗುಂಡೂರಾವ್ ಅವರ ನಂತರ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಿರಿಯ ವ್ಯಕ್ತಿಗೆ ಉನ್ನತ ಹುದ್ದೆಯ ಅವಕಾಶ ಯಾಕೆ ನೀಡಬಾರದು ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಇದು ತಾನು ಸ್ಪರ್ಧಿಸುವ ಕೊನೆಯ ಚುನಾವಣೆ ಎಂದು ಹೇಳಿದ್ದರು.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ದಶಕದಿಂದಲೂ ಪೈಪೋಟಿ ಇದೆ. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಉಭಯ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದರು. ಆದರೆ, ಫೆಬ್ರುವರಿಯಲ್ಲಿ ಉತ್ತರ ಮತ್ತು ದಕ್ಷಿಣ ಭಾಗಗಳಲ್ಲಿ ಪ್ರತ್ಯೇಕ ಬಸ್ ಯಾತ್ರೆಗಳನ್ನು ಕೈಗೊಂಡಿದ್ದರು. ಆದರೆ, ಇಬ್ಬರೂ ನಾಯಕರೂ ಒಗ್ಗಟ್ಟಾಗಿದ್ದಾರೆ. ಒಗ್ಗಟ್ಟಿನ ಹೋರಾಟದ ಅಗತ್ಯದ ಬಗ್ಗೆ ಅವರಿಬ್ಬರಿಗೆ ಅರಿವಿದೆ ಎಂದು ಪಕ್ಷದ ಇತರ ಹಿರಿಯ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಆದರೆ, ಸಿಎಂ ಹುದ್ದೆಯ ಗುದ್ದಾಟ ಮಾತ್ರ ಇವರಿಬ್ಬರಲ್ಲಿ ಬಲವಾಗಿ ಬೇರೂರಿದೆ.








