ಬಿಎಸ್ ವೈ ಪದತ್ಯಾಗ : ಬಿಜೆಪಿ ತೊಲಗಿದರೆ ನೆಮ್ಮದಿ ಎಂದ ಸಿದ್ದರಾಮಯ್ಯ

1 min read

ಬಿಎಸ್ ವೈ ಪದತ್ಯಾಗ : ಬಿಜೆಪಿ ತೊಲಗಿದರೆ ನೆಮ್ಮದಿ ಎಂದ ಸಿದ್ದರಾಮಯ್ಯ

ಬೆಂಗಳೂರು : ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ ಎಂದು ಸಿಎಂ ಬದಲಾವಣೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈ ವರೆಗೆ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಜಾನುವಾರುಗಳು ಸಾವಿಗೀಡಾಗಿವೆ. ಜನರ ಕಷ್ಟ ಅರಿತು ಅವರ ನೆರವಿಗೆ ಧಾವಿಸಬೇಕಿದ್ದ ಬಿಜೆಪಿ ನಾಯಕರು ಮುಖ್ಯಮಂತ್ರಿ ಬದಲಾವಣೆ, ಮಂತ್ರಿ ಪದವಿ ಉಳಿಸಿಕೊಳ್ಳುವುದರಲ್ಲಿ ಮಗ್ನರಾಗಿದ್ದಾರೆ.

Siddaramaiah Saaksha tv

ಬಿಜೆಪಿ ಪಕ್ಷವೇ ಭ್ರಷ್ಟರ ಪಕ್ಷವಾಗಿರುವುದರಿಂದ ಶಶಿಕಲಾ ಜೊಲ್ಲೆಯವರು ಲಂಚ ಪಡೆದದ್ದನ್ನು ಬಿಜೆಪಿ ನಾಯಕರು ಸಾಧನೆಯಾಗಿ ಪರಿಗಣಿಸಿದಂತಿದೆ. ಇಲ್ಲದಿದ್ದರೆ ದಾಖಲೆ ಸಾಮೇತ ಸಿಕ್ಕಿಬಿದ್ದಿರುವ ಭ್ರಷ್ಟ ಮಂತ್ರಿಯನ್ನು ಇನ್ನೂ ಸಚಿವ ಸಂಪುಟದಲ್ಲಿ ಇಟ್ಟುಕೊಂಡು ಸುಮ್ಮನೆ ಕೂರುತ್ತಿದ್ದರೆ..?

ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd