Siddaramaiah | ಜನರಿಗೆ ಸಾರಿಗೆ ಸೇವೆ ಕಡಿಮೆ ದರದಲ್ಲಿ ನೀಡಬೇಕು
ಬೆಂಗಳೂರು : ಹೆದ್ದಾರಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಶುಲ್ಕ ವಸೂಲಿಯಿಂದ ಸಂಪೂರ್ಣ ವಿನಾಯಿತಿ ನೀಡಬೇಕು ಹಾಗೂ ವಿದ್ಯಾರ್ಥಿ, ಕಾರ್ಮಿಕ ಹಾಗೂ ಇತರೆ ಎಲ್ಲಾ ಜನ ಸಾಮಾನ್ಯರಿಗೆ ಉತ್ತಮ ಸಾರಿಗೆ ಸೇವೆಯನ್ನು ಕಡಿಮೆ ದರದಲ್ಲಿ ನೀಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಸಾರಿಗೆ ಸಂಸ್ಥೆಯ ಕಾರ್ಮಿಕರನ್ನು 10-12 ಗಂಟೆಗಳಷ್ಟು ಕಾಲ ದುಡಿಸಲಾಗುತ್ತಿದೆ. ಬಿಜೆಪಿ ಸರ್ಕಾರದ ಈ ಶೋಷಣೆಯನ್ನು ವಿರೋಧಿಸಿ ಕಳೆದ ವರ್ಷ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೆಂದು ವಜಾ ಮಾಡಿದ್ದ ಸಿಬ್ಬಂದಿಗಳಲ್ಲಿ 1,500 ಜನರನ್ನು ಇದುವರೆಗೂ ಕೆಲಸಕ್ಕೆ ಸೇರಿಸಿಕೊಂಡಿಲ್ಲ.
ಈಗ ಲಭ್ಯವಿರುವ ಇಂಧನ ಕೇವಲ 3-4 ದಿನಕ್ಕೆ ಮಾತ್ರ ಸಾಕಾಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆ ನಂತರ ಏನು ಮಾಡಬೇಕೆಂಬ ಬಗ್ಗೆ ಬಿಜೆಪಿ ಸರ್ಕಾರಕ್ಕೂ ತಿಳಿದಿಲ್ಲ. ಇದನ್ನೆಲ್ಲ ನೋಡಿದರೆ ಜನಸಾಮಾನ್ಯರ ಸಾರಿಗೆ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಿಕೊಡಲು ಸಿದ್ಧತೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ.
ಸರ್ಕಾರಿ ಉದ್ದೇಶಕ್ಕೆ ಬಳಕೆಯಾಗುತ್ತಿರುವ ಇಂಧನಕ್ಕೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಬೇಕು. ರಾಜ್ಯ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೆ ನೀಡಬೇಕಾದ ಸವಲತ್ತುಗಳನ್ನು ಕೂಡಲೆ ಬಿಡುಗಡೆ ಮಾಡಬೇಕು. ವಜಾ ಮಾಡಿರುವ ಸಿಬ್ಬಂದಿಗಳನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು @BJP4Karnataka ಸರ್ಕಾರವನ್ನು ಒತ್ತಾಯಿಸುತ್ತೇನೆ. 12/13#KSRTC
— Siddaramaiah (@siddaramaiah) July 1, 2022
ಸರ್ಕಾರಿ ಬಸ್ಸುಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ವಿತರಿಸಬೇಕಾದ ಹಾಗೂ ಡೀಸೆಲ್ ಮೇಲೆ ತೆರಿಗೆ ಮನ್ನಾ ಮಾಡಬೇಕಾದ ನರೇಂದ್ರ ಮೋದಿ ಮತ್ತು ಬಸವರಾಜ ಬೊಮ್ಮಾಯಿಯವರ ಬಿಜೆಪಿ ಸರ್ಕಾರ ಜನರನ್ನು ಸುಲಿಗೆ ಮಾಡಲು ನಿಂತಿವೆ.ಜನಪರವಾದ ಸರ್ಕಾರ ಮಾಡುವ ಕೆಲಸವೆ ಇದು?
ಸರ್ಕಾರಿ ಉದ್ದೇಶಕ್ಕೆ ಬಳಕೆಯಾಗುತ್ತಿರುವ ಇಂಧನಕ್ಕೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಬೇಕು. ರಾಜ್ಯ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೆ ನೀಡಬೇಕಾದ ಸವಲತ್ತುಗಳನ್ನು ಕೂಡಲೆ ಬಿಡುಗಡೆ ಮಾಡಬೇಕು. ವಜಾ ಮಾಡಿರುವ ಸಿಬ್ಬಂದಿಗಳನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಸರ್ಕಾರವನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.