ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾಲಿ – ಮಾಜಿ ಸಿಎಂಗಳು- ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಕಿಡಿ…!
ಕೊರೋನಾ ಸೋಂಕಿನಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಇವರಿಬ್ಬರು ಚೇತರಿಸಿಕೊಂಡಿದ್ದಾರೆ. ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಎಸ್‍ವೈ ಮತ್ತು ಸಿದ್ದರಾಮಯನ್ಯವರು ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಭೀತಿಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಬಿಎಸ್‍ವೈ ಆಸ್ಪತ್ರೆಯಿಂದಲೇ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಇನ್ನು ಪಕ್ಕದ ಬೆಡ್ ನಲ್ಲಿರುವ ಸಿದ್ದರಾಮಯ್ಯನವರು ಸರ್ಕಾರದ ಕಾರ್ಯ ವೈಖರಿ ವಿರುದ್ಧ ಸರಣಿ ಟ್ವಿಟ್ ಗಳನ್ನು ಮಾಡಿ ತರಾಟೆಗೆ ತೆಗೆದುಕೊಂಡಿದಾರೆ.
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ ಮತ್ತು ಏರುತ್ತಿರುವ ನೆರೆಯಿಂದಾಗಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾದ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂ ಸಿದ್ಧರಾಮಯ್ಯ ಪ್ರಶ್ನೆ ಮಾಡಿ ಟ್ವಿಟ್ ಮಾಡಿದ್ದಾರೆ.
ಇನ್ನೊಂದು ಟ್ವಿಟ್ ನಲ್ಲಿ ಸಿದ್ದರಾಮಯ್ಯನವರು ಸಿಎಂ ಬಿಎಸ್‍ವೈಗೆ ಸಲಹೆ ನೀಡಿದ್ದಾರೆ. ಆಸ್ಪತ್ರೆಯಲ್ಲಿರುವ ಸಿಎಂ ಬಿಎಸ್‍ವೈ ಅವರು ತಕ್ಷಣವೇ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿ ವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಇನ್ನು ರಾಜ್ಯದ ಕಂದಾಯ ಸಚಿವರು ಕೂಡ ಕ್ವಾರಂಟೈನಲ್ಲಿದ್ದಾರೆ ಎಂದು ಹೇಳಲಾಗುತ್ತದೆ. ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ ಹೆಚ್ಚಿರುತ್ತದೆ. ಹೀಗಾಗಿ ಸಿಎಂ ಬಿಎಸ್‍ವೈ ಸೂಕ್ತ ಕ್ರಮತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ ವರ್ಷದ ಆಗಸ್ಟ್ -ಅಕ್ಟೋಬರ್ ತಿಂಗಳಿನ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ. ಹಳೆಯ ಹಾನಿಯ ಪರಿಹಾರ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ಎಚ್ಚರಿಸುತ್ತಿದ್ರೂ ಸರ್ಕರ ಸ್ಪಂದಿಸುತ್ತಿಲ್ಲ. ರಾಜ್ಯ ಸರ್ಕಾರದ ನಿರ್ಲಕ್ಷ್ತಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯನವರು ಸರಣಿ ಟ್ವೀಟ್‍ಗಳ ಮೂಲಕ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.