ಬೆಂಗಳೂರು : ರಾಜ್ಯ ಸರ್ಕಾರ ಕೋವಿಡ್ ಹೆಸರಲ್ಲಿ 2000 ಕೋಟಿಗೂ ಅಧಿಕ ಅವ್ಯವಹಾರ ನಡೆಸಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯನವರು ಗಾಳಿಯಲ್ಲಿ ಗುದ್ದಾಡುವುದು ಬೇಡ ಎಂದು ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ಆಗಿದೆ ಎನ್ನುತ್ತಾರೆ. ಒಂದು ಗುರುತರ ಆರೋಪವನ್ನು ಮಾಡಲಿ. ಯಾವುದೇ ದಾಖಲೆಯಿಲ್ಲದೇ ಆರೋಪ ಮಾಡುವುದು ಸರಿಯೇ ಎಂದು ಪ್ರಶ್ನಿಸಿದರು.
ಇನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದವರು. ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರ ಬಗ್ಗೆ ಕನಿಕರ ಬರುತ್ತಿದೆ ಎಂದು ಕುಟುಕಿದ ಶೆಟ್ಟರ್, ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಇಲಾಖೆಯವರು ಅವ್ಯವಹಾರ ನಡೆದಿದ್ದರೆ ಮಾಹಿತಿ ಕೊಡುತ್ತಾರೆ. ಸಿದ್ದರಾಮಯ್ಯನವರು ಗಾಳಿಯಲ್ಲಿ ಗುದ್ದಾಡುವುದು ಬೇಡ ಎಂದರು.