ನೆಹರು ಅವರಿಗೆ ಕಟ್ಟುವುದಷ್ಟೇ ಗೊತ್ತಿತ್ತು.. ಮೋದಿ ಅವರು ಕೆಡವುದನ್ನಷ್ಟೆ ಕಲಿತಿದ್ದಾರೆ
ಬೆಂಗಳೂರು : ಜವಾಹರಲಾಲ ನೆಹರೂ ಅವರಿಗೆ ಕಟ್ಟುವುದಷ್ಟೇ ಗೊತ್ತಿತ್ತು, ನಿಮ್ಮ ನರೇಂದ್ರ ಮೋದಿ ಅವರು ಕೆಡವುದನ್ನಷ್ಟೇ ಕಲಿತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.
ನೆಹರೂ ಅವರೊಂದಿಗೆ ಮೋದಿ ಹೋಲಿಕೆ ಸಾಧ್ಯವೇ ಇಲ್ಲ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ದೇಶ ವಿಭಜನೆಯ ಗಾಯಕ್ಕೆ ಸೌಹಾರ್ದತೆಯ ಮುಲಾಮು ಹಚ್ಚಿದವರು ಜವಾಹರಲಾಲ ನೆಹರೂ. ಒಣಗಿದ ಗಾಯಗಳನ್ನು ಕೋಮುದ್ವೇಷದ ಮೂಲಕ ಕೆದಕುತ್ತಾ ಸಾಮಾಜಿಕ ಆರೋಗ್ಯವನ್ನು ಕೆಡಿಸುತ್ತಿರುವವರು ನಿಮ್ಮ ನರೇಂದ್ರ ಮೋದಿ ಅವರು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಅಲ್ಲದೇ ಭಾಕ್ರಾ ನಂಗಲ್, ಹಿರಾಕುಡ್, ದಾಮೋದರ ಕಣಿವೆ ಯೋಜನೆಗಳ ಮೂಲಕ ಭಾರತವೆಂಬ ಆಧುನಿಕ ದೇವಾಲಯವನ್ನು ನಿರ್ಮಾಣ ಮಾಡಿದ್ದ ಜವಾಹರಲಾಲ ನೆಹರೂ ಅಭಿವೃದ್ದಿಯ ಮುನ್ನೋಟದಿಂದ ದೇಶ ಕಟ್ಟಿದ್ದರು. ಅವರಿಗೆ ಕಟ್ಟುವುದಷ್ಟೇ ಗೊತ್ತಿತ್ತು, ನಿಮ್ಮ ನರೇಂದ್ರ ಮೋದಿ ಅವರು ಕೆಡವುದನ್ನಷ್ಟೇ ಕಲಿತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಭಾಕ್ರಾ ನಂಗಲ್, ಹಿರಾಕುಡ್, ದಾಮೋದರ ಕಣಿವೆ ಯೋಜನೆಗಳ ಮೂಲಕ ಭಾರತವೆಂಬ ಆಧುನಿಕ ದೇವಾಲಯವನ್ನು ನಿರ್ಮಾಣ ಮಾಡಿದ್ದ ಜವಾಹರಲಾಲ ನೆಹರೂ ಅಭಿವೃದ್ದಿಯ ಮುನ್ನೋಟದಿಂದ ದೇಶ ಕಟ್ಟಿದ್ದರು. ಅವರಿಗೆ ಕಟ್ಟುವುದಷ್ಟೇ ಗೊತ್ತಿತ್ತು, ನಿಮ್ಮ @narendramodi ಅವರು ಕೆಡವುದನ್ನಷ್ಟೇ ಕಲಿತಿದ್ದಾರೆ. 5/11#NehruTheArchitect
— Siddaramaiah (@siddaramaiah) May 29, 2022
ಎಸ್.ಬಿ.ಐ, ಎಲ್.ಐ.ಸಿ ಯಿಂದ ಹಿಡಿದು ಭಾರತೀಯ ತೈಲ ನಿಗಮ, ಏರ್ ಇಂಡಿಯಾದ ವರೆಗೆ ನೂರಾರು ಸರ್ಕಾರಿ ಸಂಸ್ಥೆಗಳನ್ನು ಕಟ್ಟಿದವರು ಪಂಡಿತ ಜವಾಹರಲಾಲ ನೆಹರೂ. ಅದನ್ನು ಮಾರಾಟಕ್ಕಿಟ್ಟವರು ಯಾರೆಂದು ಬಿಡಿಸಿ ಹೇಳಬೇಕೇ?
ಉಕ್ಕಿನ ಕಾರ್ಖಾನೆ, ರೈಲ್ವೆ ಎಂಜಿನ್-ಕೋಚ್ ನಿರ್ಮಾಣ ಘಟಕಗಳು, ಯುದ್ಧ ವಿಮಾನ-ಟ್ಯಾಂಕ್ ಗಳು, ಉಷ್ಣವಿದ್ಯುತ್ ಉತ್ಪಾದನಾ ಸಲಕರಣೆಗಳು ಹೀಗೆ ಸರ್ಕಾರಿ ಸ್ವಾಮ್ಯದಲ್ಲಿ ಸಾಲು ಸಾಲು ಉದ್ಯಮಗಳನ್ನು ಕಟ್ಟಿ ಬೆಳೆಸಿದ್ದವರು ಜವಾಹರಲಾಲ ನೆಹರೂ. ನರೇಂದ್ರ ಮೋದಿ ಅವರು ಕಟ್ಟಿದೆಷ್ಟು, ಕೆಡವಿದೆಷ್ಟು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.








