Siddaramaiah | ಪೆಟ್ರೋಲ್, ಡೀಸೆಲ್ ತೆರಿಗೆಯಿಂದ 23 ಲಕ್ಷ ಕೋಟಿ ಸಂಗ್ರಹ

1 min read
Siddaramaih Saaksha Tv

Siddaramaiah | ಪೆಟ್ರೋಲ್, ಡೀಸೆಲ್ ತೆರಿಗೆಯಿಂದ 23 ಲಕ್ಷ ಕೋಟಿ ಸಂಗ್ರಹ

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಒಂದರಲ್ಲೇ ಕಳೆದ ಎಂಟು ವರ್ಷಗಳಲ್ಲಿ ಕೇಂದ್ರ ಬಿಜೆಪಿ ಸರ್ಕಾರ 23 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಇಳಿಕೆಯ ಕೇಂದ್ರ  ಬಿಜೆಪಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಮೊದಲಿದ್ದ ಅಬಕಾರಿ ಸುಂಕಕ್ಕೆ ಸಮನಾಗಿ ತೆರಿಗೆ ಕಡಿತ ಮಾಡಬಹುದು ಎಂಬ ನನ್ನ ನಿರೀಕ್ಷೆ ಹುಸಿಯಾಗಿದೆ.

ಯು.ಪಿ.ಎ ಸರ್ಕಾರದ ಕೊನೆ ಅವಧಿಯಲ್ಲಿ (2014ರ ಆರಂಭದಲ್ಲಿ) ಡೀಸೆಲ್ ಮೇಲೆ ರೂ.3.45 ಹಾಗೂ ಪೆಟ್ರೋಲ್ ಮೇಲೆ ರೂ.9.20  ಅಬಕಾರಿ ಸುಂಕ ಇತ್ತು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಡೀಸೆಲ್ ಮೇಲೆ ರೂ. 31.84 ಹಾಗೂ ಪೆಟ್ರೋಲ್ ಮೇಲೆ ರೂ. 32.98 ಗೆ ತೆರಿಗೆ ಏರಿಸಲಾಗಿತ್ತು.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಒಂದರಲ್ಲೇ ಕಳೆದ ಎಂಟು ವರ್ಷಗಳಲ್ಲಿ ಕೇಂದ್ರ ಬಿಜೆಪಿ ಸರ್ಕಾರ 23 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸಿದೆ. ಕೊರೊನಾ ಆರ್ಭಟದ ನಂತರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಜನ ಸಾಮಾನ್ಯರಿಗೆ ಈ ತೆರಿಗೆ ಕಡಿತ ಕೊಂಚ ನಿರಾಳತೆ ಉಂಟುಮಾಡಿದೆ, ಪೂರ್ಣ ಪ್ರಮಾಣದ್ದಲ್ಲ ಎಂದು ಬರೆದುಕೊಂಡಿದ್ದಾರೆ. siddaramaiah-slams bjp govt karnataka

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd