Siddaramaiah | ಲಂಚದ ದುಡ್ಡಿನಲ್ಲಿ ಬಿಜೆಪಿಯವರು ಕಾರ್ಯಕ್ರಮ
ಹುಬ್ಬಳ್ಳಿ : ಸಂಕಷ್ಟದಲ್ಲಿರುವ ಜನರಿಗೆ ಸ್ಪಂದನೆ ಮಾಡೋದು ಬಿಟ್ಟು ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಜನಸ್ಪಂದನ ಕಾರ್ಯಕ್ರಮದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.
ಬಿಜೆಪಿ ಜನಸ್ಪಂದನಾ ಕಾರ್ಯಕ್ರಮದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯವರು ಅಡಬಿಟ್ಟಿ ಹಣದಲ್ಲಿ ಮತ್ತು ಲಂಚದ ಹಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡ್ತಿದ್ದಾರೆ.
ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ, ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.
ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಲಂಚ ಹೊಡೆದಿರೋ ದುಡ್ಡಿನಲ್ಲಿ ಬಿಜೆಪಿಯವರು ಕಾರ್ಯಕ್ರಮ ಮಾಡ್ತಿದ್ದಾರೆ..

ಸಂಕಷ್ಟದಲ್ಲಿರೋ ಜನರಿಗೆ ಸ್ಪಂದನೆ ಮಾಡೋದು ಬಿಟ್ಟು ಡ್ಯಾನ್ಸ್ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಉಮೇಶ ಕತ್ತಿಯವರು ಉತ್ತರ ಕರ್ನಾಟಕದ ರಾಜಕಾರಣಿ, ಅವರದ್ದೇ ಪಕ್ಷದ ಪ್ರಭಾವಿ ರಾಜಕಾರಣಿ.
ಅವರ ನಿಧನದ ಹಿನ್ನೆಲೆ ಒಂದು ಕಡೆ ಶೋಕಾಚರಣೆ ಮಾಡ್ತೀವಿ ಅಂತಾರೆ ಇನ್ನೊಂದುಕಡೆ ಡ್ಯಾನ್ಸ್ ಮಾಡ್ತಾರೆ.
ಬಿಜೆಪಿಯವರಿಗೆ ಜನರ ಬಗ್ಗೆ ಖಾಳಜಿ ಇಲ್ಲ ದುಡ್ಡು ಹೊಡೆಯೋದ್ರಲ್ಲಿ ಮಾತ್ರ ಕಾಳಜಿ ಇದೆ.
ಪಿಎಸ್ ಐ ಹಗರಣದಲ್ಲಿ ಶಾಸಕ ಬಸವರಾಜ ದಡೇಸಗೂರು ಹಣ ಪಡೆದ ಬಗ್ಗೆ ತಾವೇ ಒಪ್ಪಿಕೊಂಡಿದ್ದಾರೆ.
ಆತನ ವಿರುದ್ಧ ಎಫ್ ಐಆರ್ ದಾಖಲು ಮಾಡಿ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.








