ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಿಡಿಕಾರಿದ್ದು,ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ್ದೀರಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಶಹಬ್ಬಾಸ್, ಯಡಿಯೂರಪ್ಪನವರೇ. ಒಂದೆಡೆ ಕೊರೊನಾ ವಾರಿಯರ್ಸ್ಗೆ ಆಕಾಶದಿಂದ ಹೂಮಳೆ ಸುರಿಸುತ್ತೀರಿ, ಇನ್ನೊಂದೆಡೆ ಕೊಲೆ ಬೆದರಿಕೆ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ರಕ್ಷಣೆ ನೀಡದೆ ವರ್ಗಾವಣೆ ಮಾಡ್ತೀರಿ. ಇದೇನಾ ಕೊರೊನಾ ವಾರಿಯರ್ಸ್ಗೆ ಕೊಡುವ ಗೌರವ ಎಂದು ಪ್ರಶ್ನಿಸಿದ್ದಾರೆ.
ಶಹಬ್ಬಾಸ್, @BSYBJP ಅವರೇ,
ಒಂದೆಡೆ ಕೊರೊನಾ ವಾರಿಯರ್ಸ್ಗೆ ಆಕಾಶದಿಂದ ಹೂಮಳೆ ಸುರಿಸುತ್ತೀರಿ,ಇನ್ನೊಂದೆಡೆ ಕೊಲೆ ಬೆದರಿಕೆ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ರಕ್ಷಣೆ ನೀಡದೆ ವರ್ಗಾವಣೆ ಮಾಡ್ತೀರಿ.
ಇದೇನಾ ಕೊರೊನಾ ವಾರಿಯರ್ಸ್ಗೆ ಕೊಡುವ ಗೌರವ?
1/2 pic.twitter.com/Wnst5e1YdP— Siddaramaiah (@siddaramaiah) July 29, 2020
ಮತ್ತೊಂದು ಟ್ವೀಟ್ ನಲ್ಲಿ, “ಕೊರೊನಾ ಅಕ್ರಮ ಬಯಲಿಗೆಳೆದರೆ ಅಧಿಕಾರಿಗಳ ನೈತಿಕಸ್ಥೈರ್ಯ ಕುಸಿಯುವಂತೆ ಮಾಡ್ತೀರಿ ಎಂದು ದೂರುತ್ತೀರಿ, ಮೊದಲು, ಭ್ರಷ್ಟರ ರಕ್ಷಣೆಗಾಗಿ ಬಿಬಿಎಂಪಿ ಆಯುಕ್ತರ ವರ್ಗಾವಣೆ ಮಾಡಿದ್ದೀರಿ, ಈಗ ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ್ದೀರಿ. ಇದೇನಾ ನಿಮ್ಮ ಕೊರೊನಾ ವಿರುದ್ಧದ ಹೋರಾಟ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕೊರೊನಾ ಅಕ್ರಮ ಬಯಲಿಗೆಳೆದರೆ ಅಧಿಕಾರಿಗಳ ನೈತಿಕಸ್ಥೈರ್ಯ ಕುಸಿಯುವಂತೆ ಮಾಡ್ತೀರಿ ಎಂದು ದೂರುತ್ತೀರಿ,
ಮೊದಲು, ಭ್ರಷ್ಟರ ರಕ್ಷಣೆಗಾಗಿ ಬಿಬಿಎಂಪಿ ಆಯುಕ್ತರ ವರ್ಗಾವಣೆ ಮಾಡಿದ್ದೀರಿ,
ಈಗ ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ್ದೀರಿ. ಇದೇನಾ ನಿಮ್ಮ ಕೊರೊನಾ ವಿರುದ್ಧದ ಹೋರಾಟ?
2/2 pic.twitter.com/FCGDFqvfFQ— Siddaramaiah (@siddaramaiah) July 29, 2020








