ಶೈಕ್ಷಣಿಕ ಕ್ಷೇತ್ರದಲ್ಲಿ ಬಿಕ್ಕಟ್ಟು : ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಬೆಂಗಳೂರು : ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ನೇರ ಹೊಣೆಗಾರರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ..
ರಾಜ್ಯ ಸರ್ಕಾರದ ಎಡಬಿಡಂಗಿ ನಿಲುವುಗಳಿಂದಾಗಿ ವಿದ್ಯಾರ್ಥಿಗಳು,ಪೋಷಕರು ಮತ್ತು ಖಾಸಗಿ ಶಾಲೆಗಳ ಮಾಲೀಕರು ಎಲ್ಲರೂ ಬೀದಿಗಿಳಿದಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಕ್ಷಣ ಸ್ಪಷ್ಟನಿರ್ಧಾರ ಕೈಗೊಂಡು ಈ ಬಿಕ್ಕಟ್ಟನ್ನು ಬಗೆಹರಿಸಿ ವಿದ್ಯಾರ್ಥಿಗಳನ್ನು ರಕ್ಷಿಸಬೇಕು.
ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ನೇರ ಹೊಣೆಗಾರರು.
ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ನಿಜ : ಜೆಡಿಎಸ್ ಶಾಸಕ ಬಾಂಬ್
ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದಕ್ಕಾಗಿ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ.
ತರಗತಿಗಳು ನಡೆಯದೆ ಇದ್ದರೂ ಬೋದನಾ ಶುಲ್ಕದ ಜೊತೆಯಲ್ಲಿ ಪ್ರಯೋಗಶಾಲೆ, ಲೈಬ್ರೆರಿ ಮತ್ತಿತರ ಪಠ್ಯೇತರ ಶುಲ್ಕ ವಸೂಲಿಗೆ ಹೊರಟಿರುವ ಖಾಸಗಿ ಶಾಲೆಗಳು ಸರ್ಕಾರದ ಪೊಳ್ಳುಬೆದರಿಕೆಗೆ ಜಗ್ಗುತ್ತಿಲ್ಲ. ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ಷಾಮೀಲಾಗಿದೆ.
ಶಾಲೆ ಪುನರಾರಂಭದ ಬಗ್ಗೆ ಸರಣಿ ಸಭೆಗಳು, ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳ ತರಹೇವಾರಿ ಹೇಳಿಕೆಗಳು ಪೋಷಕರನ್ನು ಗೊಂದಲಕ್ಕೆ ನೂಕಿವೆ. ತಕ್ಷಣ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel