ಬೆಂಗಳೂರು : ಇಂದು ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ.ದೇವರಾಜ ಅರಸು ಅವರ ಹುಟ್ಟುಹಬ್ಬ. ಈ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಅರಸು ಅವರನ್ನು ನೆನೆದಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ ನಲ್ಲಿ, “ಅಧಿಕಾರ, ಸಂಪತ್ತು ಮತ್ತು ಅವಕಾಶದ ಸಮಾನ ಹಂಚಿಕೆಯ ಮೂಲಕ ಸಮಸಮಾಜ ನಿರ್ಮಾಣಕ್ಕೆ ಭದ್ರಬುನಾದಿ ಹಾಕಿಹೋದ ಪರಿವರ್ತನೆಯ ಹರಿಕಾರ ದಿವಂಗತ ಡಿ.ದೇವರಾಜ ಅರಸು ಅವರಿಗೆ, ಸಾಮಾಜಿಕ ನ್ಯಾಯದ ಬಂಡಿಯನ್ನು ಮುನ್ನಡೆಸುವ ಕಾಯಕಕ್ಕೆ ಕೈಜೋಡಿಸುವ ಮೂಲಕ ನಾವೆಲ್ಲ ಹುಟ್ಟುಹಬ್ಬದ ಶುಭಾಶಯ ಕೋರೋಣ, ಗೌರವ ಅರ್ಪಿಸೋಣ ಎಂದು ಬರೆದುಕೊಂಡಿದ್ದಾರೆ.
https://twitter.com/siddaramaiah/status/1296247944698454017?s=20
“ಋಣಮುಕ್ತ, ಭೂ ಸುಧಾರಣಾ ಕಾಯ್ದೆಗಳ ಮೂಲಕ ಜನರ ಮನದಲ್ಲಿ ಶಾಶ್ವತವಾಗಿ ನೆಲೆಸಿರುವ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಶ್ರೀ ದೇವರಾಜ್ ಅರಸ್ ಅವರ ಜನ್ಮ ಜಯಂತಿಯಂದು ಅವರಿಗೆ ನನ್ನ ಗೌರವಪೂರ್ಣ ನಮನಗಳು. ಸಮಾಜದ ಶೋಷಿತ ವರ್ಗಗಳಿಗೆ ಸ್ಥಾನಮಾನ ಕಲ್ಪಿಸಿದ ಈ ಮಹಾನ್ ಮುತ್ಸದ್ಧಿಯ ಬದುಕು ನಮಗೆಲ್ಲಾ ಮಾದರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
https://twitter.com/DKShivakumar/status/1296297928135344128?s=20









